ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಾರ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ 209, ರಾಜ್ಯದ ಹೆಲ್ತ್ ಬುಲೆಟಿನ್ ಪ್ರಕಾರ 276 ಕೊರಾನ ಸೋಂಕು.

ಶಿವಮೊಗ್ಗ ನಗರ ಮತ್ತು ತಾಲೂಕಿನಲ್ಲಿ-138 ಭದ್ರಾವತಿಯಲ್ಲಿ-38, ಶಿಕಾರಿಪುರ-16, ತೀರ್ಥಹಳ್ಳಿ-07, ಸಾಗರದಲ್ಲಿ 08, ಹೊಸನಗರದಲ್ಲಿ-01 ಹಾಗೂ ಸೊರಬದಲ್ಲಿ 03 ಪ್ರಕರಣಗಳು  ಇತರೆ ಜಿಲ್ಲೆಯಿಂದ ಬಂದು ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 6 ಜನ 
ಶಿವಮೊಗ್ಗ;ಜಿಲ್ಲೆಯಲ್ಲಿ ಇಂದು 209 ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 6200 ಎಂದು ಜಿಲ್ಲಾ  ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.

ಇಂದು ಸಹ ಸೋಂಕಿನಿಂದ 5 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 107 ಕ್ಕೇರಿದೆ.  ಜಿಲ್ಲೆಯಲ್ಲಿ ಇದುವರೆಗೂ 1375 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, 904 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. 6200 ಜನರಿಗೆ ಕೊರೋನ ಪಾಸಿಟಿವ್ ಎಂದು ವರದಿ ಪ್ರಕಟವಾಗಿದೆ. ಇಂದು 600 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.
ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 4574 ಕ್ಕೇರಿದೆ. 138 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 272 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 277 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 738 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯೆಗೊಂಡ ಕೊರೋನ ಪಾಸಿಟಿವ್ ಸಂಖ್ಯೆ  1476 ಎಂದು ಬುಲಿಟಿನ್ ತಿಳಿಸಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.