ಇಂದು ಕೊರಾನ ಸೋಂಕಿತರು, ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಾರ-237 ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ-306

ಶಿವಮೊಗ್ಗ ನಗರ ಮತ್ತು ತಾಲೂಕಿನಲ್ಲಿ-128 ಭದ್ರಾವತಿಯಲ್ಲಿ-38, ಶಿಕಾರಿಪುರ-29, ತೀರ್ಥಹಳ್ಳಿ-05, ಸಾಗರದಲ್ಲಿ 09, ಹೊಸನಗರದಲ್ಲಿ-12 ಹಾಗೂ ಸೊರಬದಲ್ಲಿ 09 , ಇತರೆ ಜಿಲ್ಲೆ-7 

ಶಿವಮೊಗ್ಗ;ಜಿಲ್ಲೆಯಲ್ಲಿ ಇಂದುಜಿಲ್ಲಾ  ಹೆಲ್ತ್ ಬುಲಿಟಿನ್ ಪ್ರಕಾರ-237 ರಾಜ್ಯದ ಹೆಲ್ತ್ ಬುಲೆಟಿನ್ ಪ್ರಕಾರ-306  ಪಾಸಿಟಿವ್ ಪ್ರಕರಣ ಆಗಿದೆ.
ಇಂದು ಸಹ ಸೋಂಕಿನಿಂದ 5 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 116 ಕ್ಕೇರಿದೆ.  ಜಿಲ್ಲೆಯಲ್ಲಿ ಇದುವರೆಗೂ 1103 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, 989 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. 6656 ಜನರಿಗೆ ಕೊರೋನ ಪಾಸಿಟಿವ್ ಎಂದು ವರದಿ ಪ್ರಕಟವಾಗಿದೆ. ಇಂದು 314 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.
ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 5108 ಕ್ಕೇರಿದೆ. 172 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 141 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 222 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 766 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 37 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯೆಗೊಂಡ ಕೊರೋನ ಪಾಸಿಟಿವ್ ಸಂಖ್ಯೆ  1338 ಎಂದು ಬುಲಿಟಿನ್ ತಿಳಿಸಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.