ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಾರ ಕೊರೋನ ಪಾಸಿಟಿವ್-244 ,ರಾಜ್ಯ ಬುಲೆಟಿನ್ ಪ್ರಕಾರ-333
ಶಿವಮೊಗ್ಗ ನಗರ ಮತ್ತು ತಾಲೂಕಿನಲ್ಲಿ-125 ಭದ್ರಾವತಿಯಲ್ಲಿ-58, ಶಿಕಾರಿಪುರ-35, ತೀರ್ಥಹಳ್ಳಿ-04, ಸಾಗರದಲ್ಲಿ 05, ಹೊಸನಗರದಲ್ಲಿ-04 ಹಾಗೂ ಸೊರಬದಲ್ಲಿ 09 , ಇತರೆ ಜಿಲ್ಲೆ-04
ಶಿವಮೊಗ್ಗ;ಜಿಲ್ಲೆಯಲ್ಲಿ ಇಂದು 244 ಕೊರೋನ ಪಾಸಿಟಿವ್, ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ 333 ಒಟ್ಟು ಜಿಲ್ಲೆಯಲ್ಲಿ ಇದುವರೆಗೂ 7330 ಕೊರೋನ ಸೋಂಕಿತರೆಂದು ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.
ಇಂದು ಸಹ ಸೋಂಕಿನಿಂದ 3 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 123 ಕ್ಕೇರಿದೆ. ಜಿಲ್ಲೆಯಲ್ಲಿ ಇದುವರೆಗೂ 1231 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, 699 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. 7330 ಜನರಿಗೆ ಕೊರೋನ ಪಾಸಿಟಿವ್ ಎಂದು ವರದಿ ಪ್ರಕಟವಾಗಿದೆ. ಇಂದು 285 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.
ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 5583ಕ್ಕೇರಿದೆ. 200 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 248 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 174 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 913 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 42 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯೆಗೊಂಡ ಕೊರೋನ ಪಾಸಿಟಿವ್ ಸಂಖ್ಯೆ 1577 ಎಂದು ಬುಲಿಟಿನ್ ತಿಳಿಸಿದೆ.
Leave a Comment