ಸೆ.2ರಂದು ಸಿಎಂ ಯಡಿಯೂರಪ್ಪರಿಂದ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ
ಶಿವಮೊಗ್ಗ: ನೀರಿನಿಂದ ಮೈದುಂಬಿ ಕಂಗೊಳಿಸುತ್ತಿರುವ ಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೆ.2ರಂದು ಬಾಗಿನ ಅರ್ಪಿಸಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಭದ್ರಾ ಜಲಾಶಯದ ಹೆಲಿಪ್ಯಾಡ್’ಗೆ 12.15ಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಹೆಲಿಕಾಪ್ಟರ್ ಮೂಲಕವೇ ಮಧ್ಯಾಹ್ನ 1.45ಕ್ಕೆ ಅಲ್ಲಿಂದ ಹೊರಡಲಿರುವ ಅವರು, ಅಜ್ಜಂಪುರ ತಾಲೂಕಿನ ಬೆಟ್ಟದ ತಾವರೆಕೆರೆ ಗ್ರಾಮಕ್ಕೆ ಆಗಮಿಸಿ, ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ನೀರನ್ನು ಹರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಆನಂತರ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಇನ್ನು, ಮುಖ್ಯಮಂತ್ರಿಗಳ ಈ ಭೇಟಿಯ ವೇಳೆ ಸ್ಥಳಕ್ಕೆ ಆಗಮಿಸುವ ಎಲ್ಲ ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚಿಸಲಾಗಿದೆ.
Leave a Comment