ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ
ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಹುಂಚದಕಟ್ಟೆ ಮಧ್ಯದಲ್ಲಿ ಬರುವ ಗುಂಡಿಬೈಲು ಬಳಿ ಇಂದು ರಾತ್ರಿ 9 ಗಂಟೆಗೆ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಮತ್ತು ಸೊರಬದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವ್ಯಾಗನಾರ್ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಮುಂಭಾಗ ನಜ್ಜುಗುಜ್ಜಾಗಿವೆ.
ಕಾರುಗಳ ಒಳಗಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Comment