ಪ್ರಧಾನಿ ಮೋದಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ದೂರು
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಂಧನೆ ಪೋಸ್ಟ್ ಮಾಡಿದ ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ವಿರುದ್ದ ಕಾನೂನುಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಇಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದರು.
ದೀಪಕ್ ಸಿಂಗ್ ಎಂಬಾತ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರನ್ನು ಅಸಂವಿಧಾನಿಕ ಪದಗಳನ್ನು ಬಳಸಿ ನಿಂಧನೆ ಮಾಡಿದ್ದಾರೆ. ದೀಪಕ್ ಸಿಂಗ್ ಈ ಹಿಂದೆಯು ಅನೇಕ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ವಿರುದ್ದ ಬಿಜೆಪಿ ಹಲವು ಬಾರಿ ದೂರು ನೀಡಲಾಗಿದೆ. ಆದರೂ ಇವರು ಬುದ್ದಿ ಕಲಿತಿಲ್ಲ. ಇವರ ವಿರುದ್ದ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಬಿ.ಹರಿಕೃಷ್ಣ, ನಗರ ಪ್ರಧಾನ ಕಾರ್ಯದರ್ಶಿ ಬಳ್ಳೆಕೆರೆ ಸಂತೋಷ್, ಜಗನ್ನಾಥ್, ಅರುಣ್ ಶೆಟ್ಟಿ, ಸುಹಾಸ್ ಶಾಸ್ತ್ರಿ ಸೇರಿದಂತೆ ಹಲವರಿದ್ದರು.
Leave a Comment