ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್.ಎಸ್.ಜ್ಯೋತಿಪ್ರಕಾಶ್ ನೇಮಕ
ಶಿವಮೊಗ್ಗ: ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕರನ್ನಾಗಿ ಎಸ್.ಎಸ್.ಜ್ಯೋತಿಪ್ರಕಾಶ್ ಅವರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.
ಸದಸ್ಯರಾಗಿ ಉಮಾಮೂರ್ತಿ, ಬಿ.ಜಿ.ರಾಮಲಿಂಗಯ್ಯ, ವಿ.ಕದಿರೇಶ್, ಎಸ್.ದೇವರಾಜ್ ಅವರನ್ನು ನೇಮಕ ಮಾಡಲಾಗಿದೆ.
ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಲವರ ಹೆಸರು ಕೇಳಿಬಂದಿದ್ದವು. ಸಿಎಂ ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಬೆಂಬಲಿಗರ ನಡುವೆ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಇತ್ತು. ಅಂತಿಮವಾಗಿ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರನ್ನು ನೇಮಿಸಲಾಗಿದೆ.
ಜಿಲ್ಲಾ ಬಿಜೆಪಿ ಘಟಕದಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿರುವ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರು ಶಿವಮೊಗ್ಗ ಎಪಿಎಂಸಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
Leave a Comment