ಆರಾಧನಾ ಸಮಿತಿಯ ನೂತನ ಅಧ್ಯಕ್ಷರಾಗಿ ಬಿ.ಆರ್. ಮಧುಸೂದನ್ ಅಧಿಕಾರ ಸ್ವೀಕಾರ

ಶಿವಮೊಗ್ಗ, ಆ.31:  ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಯ ನೂತನ ಅಧ್ಯಕ್ಷರಾಗಿ ಇಂದು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ  ಸಮಾರಂಭದಲ್ಲಿ ಬಿ.ಆರ್. ಮಧುಸೂದನ್ ಅಧಿಕಾರ ಸ್ವೀಕರಿಸಿದರು.

ನಂತರ ಮಾತನಾಡಿದ ಅವರು, ಪಕ್ಷ ನನ್ನ ಕೆಲಸ ಗುರುತಿಸಿ ಜವಾಬ್ದಾರಿ ನೀಡಿದೆ. ಆ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಜನ ಮೆಚ್ಚುವಂತೆ ಕೆಲಸ ಮಾಡುವೆ. ದೇವಸ್ಥಾನಗಳ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆದು ಶ್ರಮಿಸುವುದಾಗಿ ತಿಳಿಸಿದರು.

ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ನಗರದ 35 ವಾರ್ಡ್ ಗಳಲ್ಲಿ ರುವ ಎಲ್ಲಾ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ ದಿಂದ ಸೂಕ್ತ ಅನುದಾನ ತರಲಾಗುವುದು ಎಂದರು.

ವೇದಿಕೆಯಲ್ಲಿ  ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್,  ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಮುಖಂಡರಾದ ಎಸ್. ಜ್ಞಾನೇಶ್ವರ್, ಎಸ್.ಎನ್. ಚನ್ನ ಬಸಪ್ಪ, ಗಿರೀಶ್ ಪೇಲ್, ಸಮಿತಿಯ ನೂತನ ಸದಸ್ಯರಾದ ದಿನೇಶ್, ಮಹಾಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.