ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ ;ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಮೇಣದಬತ್ತಿ ಹಚ್ಚಿ ಶ್ರದ್ಧಾಂಜಲಿ

ಶಿವಮೊಗ್ಗ;  ದೇಶದ ಮಾಜಿ ರಾಷ್ಟ್ರಪತಿಗಳು ಭಾರತರತ್ನ ಮಾಜಿ ವಿದೇಶಾಂಗ ಸಚಿವರು ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ದಿ ಗಳಾದ ಸನ್ಮಾನ್ಯ ಶ್ರೀ ಪ್ರಣಬ್ ಮುಖರ್ಜಿ ಅವರು ಇಂದು ನಿಧನರಾದ ಹಿನ್ನೆಲೆಯಲ್ಲಿ
ಅವರ ಆತ್ಮಕ್ಕೆ  ಚಿರ ಶಾಂತಿಕೋರಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೇಣದಬತ್ತಿ ಹಚ್ಚುವ ಮುಖಾಂತರ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ ಪ್ರವೀಣ್ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಎಚ್ ಸಿ ಯೋಗೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ ಗಿರೀಶ್, ಗ್ರಾಮಾಂತರ ಅಧ್ಯಕ್ಷ ಇ.ಟಿ ನಿತಿನ್ ರಾವ್ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಶರವಣ ಜಿಲ್ಲಾ ಯುವ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ಗೆಡ್ಡೆ ,ಮಸ್ತಾನ್, ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪುಷ್ಪಕ್ ಕುಮಾರ್, ಕುಮರೇಶ್ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್, ಪ್ರಭು ,ಸೂರ್ಯ, ವಿನಯ್, ಅಶೋಕ್ ಇತರರು ಇದ್ದರು*

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.