ಕೇಂದ್ರ ಸರ್ಕಾರ ನೀಡಿರುವ ಮೀಸಲಾತಿಯಂತೆ ರಾಜ್ಯ ಸರ್ಕಾರವೂ ಸಹ ಶೇ.7.5ರಷ್ಟು ಘೋಷಣೆ ಮಾಡಬೇಕು:ವಾಲ್ಮೀಕಿ ಸಮಾಜದ ಮುಖಂಡರು ಮನವಿ

 


ಶಿವಮೊಗ್ಗ: ಕೇಂದ್ರ ಸರ್ಕಾರ ನೀಡಿರುವ  ಮೀಸಲಾತಿಯಂತೆ ರಾಜ್ಯ ಸರ್ಕಾರವೂ ಸಹ ಶೇ.7.5ರಷ್ಟು ಘೋಷಣೆ ಮಾಡಬೇಕೆಂದು ಆಗ್ರಹಿಸಿ ಇಂದು ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ನೇತೃತ್ವದಲ್ಲಿ ವಾಲ್ಮೀಕಿ ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಪ್ರತಿಭಟನೆ ಮೂಲಕ ಮನವಿ ಮಾಡಿದರು.

ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದವರು ಸುಮಾರು 50ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರೆಯದೇ ಶೇ.3ರಷ್ಟು ಮಾತ್ರ ಸಿಗುತ್ತಿದೆ. ಸಂವಿಧಾನದ ಆಶಯದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ವರದಿಯನ್ನು ಸರ್ಕಾರ ಅಂಗೀಕರಿಸಬೇಕು ಮತ್ತು ರಾಜನಳ್ಳಿ ಮಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳ  ಒತ್ತಾಯವನ್ನು ಕೂಡ ಸರ್ಕಾರ ಪರಿಗಣಿಸಬೇಕು. ಮೀಸಲಾತಿ ಪ್ರಮಾಣ ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲೂ ಹೆಚ್ಚಾಗಬೇಕು, ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಶೇ.7.5 ಮೀಸಲಾತಿ ಘೋಷಣೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಡಿ.ಶಿವಪ್ಪ, ಆರ್.ಲಕ್ಷ್ಮಣ್, ಎಂ.ಆರ್.ಮೋಹನ್, ಕೆ.ಆರ್.ಸೀತಾರಾಮ ನಾಯಕ್ ಇನ್ನಿತರರು ಭಾಗವಹಿಸಿದ್ದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.