ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ಗುರುತಿಸುವ ಕಾರ್ಯ ಆರಂಭವಾಗಿದೆ:ಆಯನೂರು ಮಂಜುನಾಥ್

  ಜಿಲ್ಲಾ ಅಸಂಘಟಿತ ಕಾರ್ಮಿಕರನ್ನು ರಕ್ಷಣೆ ಮಾಡುವ ಉದ್ಧೇಶದಿಂದ ಗುರುತಿನ ಚೀಟಿ ವಿತರಣೆ-ಸದಸ್ಯತ್ವ ಅಭಿಯಾನಕ್ಕೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಿಂದ ಚಾಲನೆ


ಶಿವಮೊಗ್ಗ: ಸರ್ಕಾರದ ಸೌಲಭ್ಯಗಳನ್ನು ದೊರಕಿಸಿಕೊಡುವ ಮೂಲಕ ಅಸಂಘಟಿತ ಕಾರ್ಮಿಕರನ್ನು ರಕ್ಷಣೆ ಮಾಡುವ ಉದ್ಧೇಶದಿಂದ ಶಿವಮೊಗ್ಗ ಜಿಲ್ಲಾ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘ ಜನ್ಮತಾಳಿದ್ದು ಸಂಘದ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರು ಆದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಸಾಂಕೇತಿಕವಾಗಿ ಸದಸ್ಯತ್ವದ ಗುರುತಿನ ಚೀಟಿ ನೀಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ಗುರುತಿಸುವ ಕಾರ್ಯ ಆರಂಭವಾಗಿದೆ ಎಂದರು.

ಕೊರೋನಾ ಅವಧಿಯಲ್ಲಿ ಅಸಂಘಟಿತ ಕಾರ್ಮಿಕರು ಉದ್ಯೋಗವಿಲ್ಲದೇ ಸಂಕಷ್ಟಕ್ಕೆ ಈಡಾಗಿದ್ದು, ಅಲ್ಲದೇ ಬೀದಿ ಪಾಲಾಗುವ ಪರಿಸ್ಥಿತಿ ಬಂದಿದ್ದು, ಅವರಿಗೆ ರಕ್ಷಣೆ ನೀಡುವ ಉದ್ಧೇಶದಿಂದ ಸಂಘ ಜನ್ಮತಾಳಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಸರ್ಕಾರ ಅಸಂಘಟಿತ ಕಾರ್ಮಿಕರೆಂದು ಗುರುತಿಸಿರುವ ಚಿಂದಿ ಆಯುವವರು, ಹಮಾಲಿಗಳು, ೈಲರ್‌ಗಳು, ಕ್ಷೌರಿಕರು, ಮ್ಯಾಕ್ಯಾನಿಕ್‌ಗಳು, ಗೃಹ ಕಾರ್ಮಿಕರು, ಅಗಸರು, ಅಕ್ಕಸಾಲಿಗರು, ಕುಂಬಾರರು, ಕಂಬಾರರು, ಬುಟ್ಟಿ ಕಾರ್ಮಿಕರು ಇವರಿಗೆ ಕಾರ್ಮಿಕ ಇಲಾಖೆ ವತಿಯಿಂದ ಗುರುತಿನ ಚೀಟಿ ನೀಡಲಾಗುತ್ತಿದ್ದು, ಇನ್ನುಳಿದ ಬ್ಯೂಟಿಪಾರ್ಲರ್, ಖಾಸಗಿ ಶಾಲೆಗಳು, ಹೋೆಲ್‌ಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಹಾಗೂ ಖಾಸಗಿ ವಾಹನ ಚಾಲಕರು ಸೇರಿದಂತೆ ಇತರೆ ಕಡೆ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೂ ಕೂಡ ಗುರುತಿನ ಚೀಟಿ ನೀಡುವಂತೆ ಒತ್ತಾಯಿಸಿದರು.

ಅಸಂಘಟಿತ ಕಾಮಿಕರ ಮಕ್ಕಳಿಗೆಲ್ಲರಿಗೂ ವಿಶೇಷ ವಿದ್ಯಾರ್ಥಿವೇತನ, ಅಸಂಘಟಿತ ಕಾರ್ಮಿಕರ ಕುಟುಂಬಗಳಿಗೆ  ಉಚಿತ ವಿಮಾ ಸೌಲಭ್ಯ ಸೇರಿದಂತೆ ಆರೋಗ್ಯ ವಿಮಾ ಸೌಲಭ್ಯ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಕಾರ್ಮಿಕ ಇಲಾಖೆ ದುರ್ಬಲವಾಗಿದ್ದು, ಈ ಇಲಾಖೆಯನ್ನು ಸದೃಢಗೊಳಿಸಲು ಸರ್ಕಾರಗಳಾಗಲೀ ಹಾಗೂ ಕಾರ್ಮಿಕ ಇಲಾಖೆ ಸಚಿವರಾಗಲೀ ಪ್ರಯತ್ನಿಸುತ್ತಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಈ ಇಲಾಖೆಯನ್ನು ಸದೃಢಗೊಳಿಸಬೇಕು ಎಂದು ಆಗ್ರಹಿಸಿದರು.

ಗುರುತಿನ ಚೀಟಿ ಪಡೆದ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ 5 ಲಕ್ಷ ರೂ., ಅಂಗವಿಕಲರಾದರೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ಚಿಕಿತ್ಸೆಗಾಗಿ 50 ಸಾವಿರ ರೂ., ಪರಿಹಾರವನ್ನು ಹಾಗೂ ಇನ್ನಿತರೆ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದ್ದು, ಈ ಸೌಲಭ್ಯಗಳನ್ನು ಪಡೆಯಲು ಅಸಂಘಟಿತ ಕಾರ್ಮಿಕರು ಸಂಘದ ಸದಸ್ಯತ್ವವನ್ನು ಪಡೆಯುವಂತೆ ಮನವಿ ಮಾಡಿಕೊಂಡರು.

ಇತ್ತೀಚೆಗೆ ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದಿರುವುದು ತಕ್ಕಮಟ್ಟಿಗೆ ತಮಗೆ ಸಮಾಧಾನವಿದೆ ಎಂದ ಅವರು, ಸೆ.17 ರಂದು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಸಂಘದಿಂದ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುವುದು ಎಂದರು.

ಸಂಘದ ಸದಸ್ಯತ್ವ ಶುಲ್ಕ 100 ರೂ.ಇದ್ದು, ಗುರುತಿನ ಚೀಟಿ ಪಡೆಯಲು ಪ್ರತ್ಯೇಕವಾಗಿ 25 ರೂ. ನೀಡಬೇಕಾಗುತ್ತದೆ. ಜಿಲ್ಲೆಯಲ್ಲಿ 1 ಲಕ್ಷ ಸದಸ್ಯತ್ವವನ್ನು ಮಾಡುವ ಗುರಿ ಹೊಂದಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಕುಪೇಂದ್ರ ಆಯನೂರು, ಪ್ರದಾನ ಕಾರ್ಯದರ್ಶಿ  ಮೇಘ ಮೋಹನ್ ಜೆಟ್ಟಿ, ರಾಜೇಂದ್ರ ಕುಮಾರ್, ಎಂ.ಮಂಜುನಾಥ್, ವಿಜಯಲಕ್ಷ್ಮಿ, ಗೌರಮ್ಮ, ಉಲ್ಲಾಸ್, ಪ್ರದೀಪ್ ಮಠದ್ ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.