ದೊಡ್ಡ ಪೇಟೆ ಪೋಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಶಿವಮೊಗ್ಗ; ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 10 ಸಾವಿರ ರೂ. ಮೌಲ್ಯದ 200 ಗ್ರಾಂ ಗಾಂಜಾ, 3 ದ್ವಿಚಕ್ರವಾಹನ 4 ಮೊಬೈಲ್ ಹಾಗೂ 1495 ರೂ. ಗಳನ್ನ ವಶಪಡಿಸಿಕೊಂಡಿದ್ದಾರೆ.

ನಿನ್ನೆ ಮಿಳ್ಳಘಟ್ಟದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಹೀಂ ಯಾನೆ ಬಚ್ಚಾ(27) ಚೇತನ್ ಕುಮಾರ್ ಯಾನೆ ಚೇತು(21), ಯೋಗೀಶ್ ಯಾನೆ ಯೋಗಿ (25) ರುದ್ರೇಶ್ (30) ಇವರುಗಳು ದ್ವಿ ಚಕ್ರ ವಾಹನಗಳನ್ನು ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರ ತಂಡವನ್ನ ರಚಿಸಿ ದಾಳಿ ನಡೆಸಲಾಗಿದೆ.

ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ, ಸಿಪಿಐ ವಸಂತ್ ಕುಮಾರ್, ದೊಡ್ಡಪೇಟೆ ಪಿಎಸ್ಐ ಶಂಕರಮೂರ್ತಿ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿದ್ದು, ಖಡಕ್ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ ವಾಹನ ಮೊಬೈಲ್ ಹಾಗೂ ಹಣವನ್ನ ಅಮಾನತ್ತು ಪಡಿಸಿಕೊಂಡಿದ್ದಾರೆ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ, ಆರೋಪಿತರನ್ನು ನ್ಯಾಯಾಲಯದ ಮುಂದೆ ಹಾಜರ್ ಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ. ಮಾದಕ ವಸ್ತು ಗಾಂಜಾ ಮಾರಾಟದ ಬಗ್ಗೆ ಸಾರ್ವಜನಿಕರು ಶಿವಮೊಗ್ಗ ಜಿಲ್ಲಾ ಪೊಲೀಸ್ ದೂರವಾಣಿ ಸಂಖ್ಯೆ 9480803301 ಗೆ ಕರೆ ಮಾಡಿ ಮಾಹಿತಿಯನ್ನು ನೀಡಬಹುದು. ಮಾಹಿತಿಯನ್ನು ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.