ಬಾಲಕಾರ್ಮಿಕರನ್ನು ನೇಮಕ ಮಾಡದಂತೆ ಎಚ್ಚರಿಕೆ
ಶಿವಮೊಗ್ಗ,: ಕೋವಿಡ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ಮಕ್ಕಳು ಶಾಲೆಗೆ ದಾಖಲಾಗದೆ ಬಾಲಕಾರ್ಮಿಕರಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಬಾಲಕಾರ್ಮಿಕರನ್ನು ನೇಮಕ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಕಲ್ಯಾಣ ಅಧಿಕಾರಿ ವಿಶ್ವನಾಥ ಅವರು ಎಚ್ಚರಿಕೆ ನೀಡಿದ್ದಾರೆ.
ಇಂತಹ ಮಕ್ಕಳನ್ನು ಶೈಕ್ಷಣಿಕ ವ್ಯವಸ್ಥೆಯೊಳಗೆ ತರಲು ಕ್ರಮ ವಹಿಸಲಾಗುತ್ತಿದೆ. 18ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು ಅವಕಾಶ ಮಾಡಿಕೊಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲಕಾರ್ಮಿಕರನ್ನು ಹಾಗೂ ಅನುಸೂಚಿತ ಉದ್ದಿಮೆಗಳಲ್ಲಿ ಕಿಶೋರ ಕಾರ್ಮಿಕರನ್ನು ಕಾರ್ಖಾನೆಗಳ ಮಾಲಿಕರು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲಿಕರು, ಕಟ್ಟಡ ನಿರ್ಮಾಣ, ಗಣಿಗಳಲ್ಲಿ, ಕೃಷಿ ಕೆಲಸದಲ್ಲಿ, ಮನೆಕೆಲಸ ಸೇರಿದಂತೆ ಯಾವುದೇ ಕೆಲಸದಲ್ಲಿ ಬಾಲಕಾರ್ಮಿಕರ ನೇಮಕಾತಿ ಕಂಡು ಬಂದಲ್ಲಿ ಅಂತಹ ಮಾಲಿಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.


Leave a Comment