ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21ನೇ ಸಾಲಿನ ಕರ್ನಾಟಕ ಪೋಷಕ ಪ್ರಶಸ್ತಿ ಯೋಜನೆಯಡಿ ಕರ್ನಾಟಕದ ಪ್ರತಿಭಾನ್ವಿತ 10 ಕ್ರೀಡಾ ಪೋಷಕರನ್ನು ಗುರುತಿಸಿ, ಗೌರವಿಸಿ ಅವರಿಗೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಗರದ ನೆಹರೂ ಕ್ರೀಡಾಂಗಣದಲ್ಲಿರುವ ಇಲಾಖೆಯ ಕಚೇರಿಗೆ ಭೇಟಿ ನೀಡಿ, ನಿಗಧಿತ ನಮೂನೆ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸೆ. 25ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-223328 ನ್ನು ಸಂಪರ್ಕಿಸುವುದು.
Leave a Comment