ಪಿಕಪ್ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಸವಾರ ರಾಕೇಶ್ ಸಾವು

ಶಿವಮೊಗ್ಗ;  ರಿಪ್ಪನ್ ಪೇಟೆಯ ಮೂಗುಡ್ತಿ ಬಳಿ ಪಿಕಪ್ ವಾಹನ ಮತ್ತು ಬೈಕ್ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ  ನಡೆದಿದೆ.

ಬಾಳೂರಿನಿಂದ ರಿಪ್ಪನ್ ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ರಾಕೇಶ್ ಗೆ ರಿಪ್ಪನ್ ಪೇಟೆಯಿಂದ ಬಾಳೂರಿಗೆ ತೆರಳುತ್ತಿದ್ದ ಪಿಕಪ್ ವಾಹನ ಮೂಗುಡ್ತಿ ಗಣಪತಿ ದೇವಸ್ಥಾನದ ಬಳಿ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ರಾಕೇಶ್ (22) ಸಾವನ್ನಪ್ಪಿರುವುದು ತಿಳಿದುಬಂದಿದೆ.

 ಅಪಘಾತ ಪ್ರಕರಣ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.