ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI)ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 07 ಅಕ್ಟೋಬರ್2020ರಿಂದ 30 ದಿನಗಳ "ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್"ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ತರಬೇತಿಯಲ್ಲಿ ಊಟ - ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವತಿಯರು ಈ ತರಬೇತಿಯಲ್ಲಿ ಭಾಗವಯಿಸಲು ಅರ್ಹರಾಗಿರುತ್ತಾರೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ದಿ:02.10.2020ರೊಳಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ,CBRSETI), ಕೆನರಾ ಬ್ಯಾಂಕ್ ಪ್ರ್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ - 576104 ಇಲ್ಲಿಗೆ ತಲುಪುವಂತೆ ಕಳುಹಿಸಿಕೊಡಲು ಕೋರಲಾಗಿದೆ. ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ಆಸಕ್ತ ಕ್ಷೇತ್ರಕ್ಕೆ ಅರ್ಜಿಯನ್ನು ಕಳುಹಿಸಬೇಕಾಗಿ ವಿನಂತಿ. ಪ್ರಥಮವಾಗಿ ಬಂದ ಅರ್ಜಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2570455 ನ್ನು ಸಂಪರ್ಕಿಸುವುದು.
Leave a Comment