ವಿದ್ಯುತ್ ವ್ಯತ್ಯಯ : ಸಹಕರಿಸಲು ಮನವಿ
ಶಿವಮೊಗ್ಗ, : ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಸೆಪ್ಟಂಬರ್-04ರ ಬೆಳಿಗ್ಗೆ 10.00 ರಿಂದ ಸಂಜೆ 5.00ರವರೆಗೆ ನಗರದ ಕುವೆಂಪು ರಸ್ತೆ, ಯುನಿಟಿ ಮಕ್ಕಳ ಆಸ್ಪತ್ರೆ, ಕ್ಲಿಫ್ ಎಂಬೆಸ್ಸಿ ಹೋಟೆಲ್, ನಂದಿ ಪೆಟ್ರೋಲ್ ಬಂಕ್, ಆದಿಚುಂಚನಗಿರಿ ಸಮುದಾಯ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Comment