ನಾಳೆ ವಿಶ್ವ ಏಯ್ಡ್ಸ್‍ದಿನಾಚರಣೆ : ಜಾಗೃತಿ ಕಾರ್ಯಕ್ರಮ

ಶಿವಮೊಗ್ಗ, ನವೆಂಬರ್ 30  : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಜಿಲ್ಲಾ ಏಯ್ಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಾರ್ತಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 01ರಂದು ಮಂಗಳವಾರ ಬೆಳಿಗ್ಗೆ 10ಗಂಟೆಗೆ ರೋಟರಿ ರಕ್ತನಿಧಿ ಕೇಂದ್ರದ ರೋಟರಿ ಸಭಾಂಗಣದಲ್ಲಿ ವಿಶ್ವ ಏಯ್ಡ್ಸ್ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸೈಯದ್ ಅಜೀಜ್ ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ಈ ಸಂದರ್ಭದಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಯಂತಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಕೆ.ಎನ್.ಸರಸ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಸರ್ಜನ್ ಡಾ||ರಘುನಂದನ್, ವೈದ್ಯಕೀಯ ಅಧೀಕ್ಷಕ ಡಾ|| ಎಸ್.ಶ್ರೀಧರ್, ವಕೀಲರ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ, ಜಿಲ್ಲಾ ವಾರ್ತಾಧಿಕಾರಿ ಶಫೀ ಸಾದುದ್ದೀನ್, ಕುವೆಂಪು ವಿವಿ ಎನ್.ಎಸ್.ಎಸ್.ಕಾರ್ಯಕ್ರಮ ಸಂಯೋಜನಾಧಿಕಾರಿ ಪರಿಸರ ನಾಗರಾಜ್, ಶಿವಮೊಗ್ಗ ಮಿಡ್‍ಟೌನ್ ಅಧ್ಯಕ್ಷರು ಡಾ|| ಕೆ.ಬಿ.ಧನಂಜಯ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ|| ದಿನೇಶ್ ಜಿ.ಸಿ.  ಅವರು ಉಪಸ್ಥಿತರಿರುವರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.