ನಾಗೇಶ್ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಿ : ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ಆಗ್ರಹ
ಶಿವಮೊಗ್ಗ; ನಿನ್ನೆ ಗುರುವಾರ ಶಿವಮೊಗ್ಗ ನಗರ ಬಜರಂಗದಳದ ಸಹ ಕಾರ್ಯದರ್ಶಿ ನಾಗೇಶರವರು ವಾಯು ವಿಹಾರಕ್ಕೆ ಹೋದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾದ ಹಲ್ಲೆ ನಡೆಸಿದ್ದಾರೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಕಸಾಯಿಗಳದ್ದೇ ಕೈವಾಡವಾಗಿದೆ. ಶಿವಮೊಗ್ಗ ನಗರದಲ್ಲಿ ಅಕ್ರಮ ಕಸಾಯಿಖಾನೆ, ಅಕ್ರಮ ಗೋಸಾಗಾಟ ಹೆಚ್ಚಳವಾಗಿದೆ. ನಾಗೇಶ ಸೇರಿ ಅನೇಕರು ಇಂತಹ ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿಖಾನೆಗಳ ವಿರುದ್ಧ ಅನೇಕ ಹೋರಾಟಗಳನ್ನು ಮಾಡಿದ್ದರು. ಅದಕ್ಕಾಗಿ ಕಸಾಯಿಗಳೇ ನಾಗೇಶರವರ ಮೇಲೆ ಹಲ್ಲೆ ನಡೆಸಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಬೇಕು, ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಮತ್ತು ನಾಗೇಶ್ ರವರಿಗೆ ರಕ್ಷಣೆ ನೀಡಬೇಕು ಎಂದು ಪತ್ರಿಕ ಪ್ರಕಟಣೆ ಹೇಳಿಕೆ ನೀಡುವುದರ ಮುಖಾಂತರ ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ, ಕರ್ನಾಟಕ ಮೋಹನ ಗೌಡ
ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಆದಷ್ಟು ಬೇಗ ಗೋಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.
ದೂ. ಕ್ರ. : 7204082609
Leave a Comment