ರೈತ ವಿರೋಧಿ ಶಾಸನಗಳನ್ನು ವಾಪಾಸ್ ಪಡೆಯುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ


 ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಶಾಸನಗಳನ್ನು ವಾಪಾಸ್ ಪಡೆಯುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ  ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಬಹುರಾಷ್ಟ್ರಿಯ ಕಂಪೆನಿಗಳಿಗೆ ಮಣೆ ಹಾಕುವಂತಹ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇವು ಕೃಷಿಕರ ಹಿತಾಸಕ್ತಿಗೆ ಮಾರಕವಾಗಿ ಖಾಸಗಿಕಂಪನಿಗಳಿಗೆ ಪೂರಕವಾಗಿವೆ. ಸಾರ್ವಜನಿಕ ಉದ್ಯಮಗಳು ಇದರಿಂದ ಖಾಸಗೀಕರಣಗೊಳ್ಳುತ್ತವೆ. ಕೃಷಿಕರು ಕಂಗಾಲಾಗುತ್ತಾರೆ. ಮುಂದೊಂದು ದಿನ ಆಹಾರ ಭದ್ರತೆ ಕಾಡಬಹುದಾಗಿದೆ ಎಂದು ಪ್ರತಿಭಟನಾಕಾರರು  ಆರೋಪಿಸಿದರು. 

ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಕಾರ್ಮಿಕರ ಕಾಯ್ದೆಗಳನ್ನು ತಿದ್ದುಪಡಿಯ ಮೂಲಕ ಜಾರಿಗೆ ತಂದಿದೆ. ಈ ಎಲ್ಲ ಕಾಯ್ದೆಗಳು ರೈತರ ವಿರೋಧಿಯಾಗಿವೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ರೈತ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿವೆ. ತಕ್ಷಣವೇ ಈ ಕಾಯ್ದೆಗಳನ್ನು ವಾಪಾಸ್ ಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. 

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಹೆಚ್.ಎಸ್.ಬಾಲಾಜಿ, ಪ್ರಮುಖರಾದ ಸಿ.ಜಿ.ಮಧುಸೂದನ್, ಕೆ.ಚೇತನ್, ಮಹಮ್ಮದ್ ನಿಹಾಲ್, ವಿಜಯ್, ರವಿ, ಸುರೇಶ್ ಮತ್ತಿತರರು ಭಾಗವಹಿಸಿದ್ದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.