ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ
ಶಿವಮೊಗ್ಗ :ನಗರದ ಅಶೋಕ ವೃತ್ತದಲ್ಲಿ ಇಂದು ಸಂಜೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆಯನ್ನು ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೇಣದಬತ್ತಿ ಹಚ್ಚುವ ಮೂಲಕ ಆಚರಿಸಲಾಯಿತು.
ನಮನ ಸಭೆಯಲ್ಲಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ರವರು ಸಂಗೊಳ್ಳಿ ರಾಯಣ್ಣನ ಹೋರಾಟದ ಕಿಚ್ಚಿ ನೊಂದಿಗೆ ನೊಂದಿಗೆ ಬಾಬಾಸಾಹೇಬ್ ಅಂಬೇಡ್ಕರ್ ನೀಡಿದಂತಹ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವದ ಉಳಿವಿಗಾಗಿ ಯುವಕರು ಹೋರಾಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್ , ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್. ಎಸ್ ತಂಗರಾಜ್ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎಂ ರಾಕೇಶ್ , ಪುಷ್ಪಕ್ ಕುಮಾರ್ , ಗಗನ್ ಗೌಡ, ಕೆಎಲ್ ಪವನ್ , ಕಲ್ಲೂರು ವೆಂಕಟೇಶ್, ಅಭಿಷೇಕ್, ಸೈಯದ್ ಜಮಿಲ್ , ರಾಹುಲ್ ಸೀಗೆಹಟ್ಟಿ, ಚೇತನ್, ಮಂಡ್ಲಿ ರಾಕೇಶ್, ಶಿವಮೊಗ್ಗ ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಿ.ಎಂ ಚಿನ್ಮಯ್ , ಮಹಿಳಾ ಕಾಂಗ್ರೆಸ್ ಮುಖಂಡರಾದ ಸುವರ್ಣ ನಾಗರಾಜ್ , ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment