ಮಹಾನಗರಪಾಲಿಕೆ ಆವರಣದಲ್ಲಿ *ಗಣರಾಜ್ಯೋತ್ಸವ ಸಮಾರಂಭ*
ಶಿವಮೊಗ್ಗ ;ಮಹಾನಗರಪಾಲಿಕೆ ವತಿಯಿಂದ ಜ.26 ರ ಬೆಳಿಗ್ಗೆ 08 ಗಂಟೆಗೆ ಮಹಾನಗರಪಾಲಿಕೆ ಆವರಣದಲ್ಲಿ ಗಣರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ.
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಇವರ ಗೌರವ ಉಪಸ್ಥಿತಿಯಲ್ಲಿ ಮಹಾನಗರಪಾಲಿಕೆ ಪೂಜ್ಯ ಮಹಾಪೌರರಾದ ಸುನೀತಾ ಎಸ್.ಅಣ್ಣಪ್ಪ ಧ್ವಜಾರೋಹಣ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ಮಂಡಳಿ, ನಿಗಮ, ಪ್ರಾಧಿಕಾರಗಳ ಅಧ್ಯಕ್ಷರು, ಮಹಾನಗರಪಾಲಿಕೆ ಉಪ ಮಹಾಪೌರರು, ಪಾಲಿಕೆ ಆಡಳಿತ ಪಕ್ಷದ ನಾಯಕರು, ಪಾಲಿಕೆ ವಿರೋಧ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮಹಾನಗರಪಾಲಿಕೆ ಆಯುಕ್ತರು, ಅಧಿಕಾರಿಗಳು ಪಾಲ್ಗೊಳ್ಳುವರು.
Leave a Comment