ಶ್ರವಣದೋಷವುಳ್ಳವರಿಗೆ ಹೊಲಿಗೆ ಯಂತ್ರಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಜನವರಿ 31,: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2021-22ನೇ ಸಾಲಿಗೆ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ವಿತರಿಸಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ಪಂಚಾಯಿತಿ ಎಂ.ಆರ್.ಡಬ್ಲ್ಯೂ ರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ವಾಸಸ್ಥಳ ದೃಢೀಕರಣ, ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರ, ಹೊಲಿಗೆ ಯಂತ್ರ ತರಬೇತಿ ಪ್ರಮಾಣ ಪತ್ರ, ವೃತ್ತಿಗೆ ಸಂಬಂಧಿಸಿದ ಪ್ರಮಾಣ ಪತ್ರ, ವಿಕಲತೆಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‍ಕಾರ್ಡ್, ಪಡಿತರ ಗುರುತಿನ ಚೀಟಿ ಪ್ರತಿಗಳನ್ನು ಲಗತ್ತಿಸಿ ದಿ: 11/02/2022 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಹಿತಿಗಾಗಿ ಆಯಾ ತಾಲೂಕಿನ ಎಂ.ಆರ್.ಡಬ್ಲ್ಯೂ. ದೂ.ಸಂ.: ಶಿವಮೊಗ್ಗ-9980150110, ಭದ್ರಾವತಿ-7899137243, ಶಿಕಾರಿಪುರ-9741161346, ತೀರ್ಥಹಳ್ಳಿ-9480767638, ಸಾಗರ-9535247757, ಸೊರಬ-9731196780 ಮತ್ತು ಹೊಸನಗರ-9731922693 ಗಳನ್ನು ಸಂಪರ್ಕಿಸುವುದು.
------------------

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.