ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷರಾಗಿ ವಿಜಯ್ ಕುಮಾರ್ ಎಸ್.ಎನ್.ನೇಮಕ
ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ.ನ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಎಸ್.ಎನ್. ಇವರನ್ನು ನೇಮಕ ಮಾಡಿ ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಆದೇಶ ಮಾಡಿದ್ದಾರೆ.
ಈ ಹಿಂದೆ ಶಿವಮೊಗ್ಗ ಎನ್.ಎಸ್.ಯು.ಐ. ನಗರ ಘಟಕದ ಅಧ್ಯಕ್ಷರಾಗಿದ್ದ ವಿಜಯ್ ಕುಮಾರ್ ಅವರು ನಿರಂತರವಾಗಿ ವಿದ್ಯಾರ್ಥಿಗಳ ಪರ ಕೆಲಸ ನಿರ್ವಹಿಸುತ್ತಾ ಬಂದಿದ್ದರು. ಹಲವು ವರ್ಷಗಳಿಂದ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಇವರ ಚಟುವಟಿಕೆಯನ್ನು ಗುರುತಿಸಿ ಕೀರ್ತಿ ಗಣೇಶ್ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಸೂಚನೆ ನೀಡಿದ್ದಾರೆ.
ನೂತನ ಅಧ್ಯಕ್ಷರನ್ನು ಎನ್.ಎಸ್.ಯು.ಐ. ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು, ಹಿತೈಷಿಗಳು ಅಭಿನಂದಿಸಿದ್ದಾರೆ.
Leave a Comment