ಮೃತಪಟ್ಟ ಹರ್ಷ ನ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರ ನೀಡಲಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್ .ಸುಂದರೇಶ್ ಒತ್ತಾಯ
ಶಿವಮೊಗ್ಗ: ಮೃತಪಟ್ಟ ಹರ್ಷ ನ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್ ಸುಂದರೇಶ್ಅವರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ,
ಕೃತ್ಯ ಎಸಗಿದ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು ಹಾಗು ಗಲಾಟೆ ದೊಂಬಿಯಿಂದ ನಷ್ಟವಾದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಕ್ಕೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ವತಿಯಿಂದ ಸುಂದರೇಶ್ ಮತ್ತು ಆರ್.ಪ್ರಸನ್ನ ಕುಮಾರ್ ಮತ್ತಿತರರು ಮೃತ ಹರ್ಷನ ಮನೆಗೆ ಬೇಟಿ ನೀಡಿ ಕುಟುಂಬದ ವರಿಗೆ ಸಾಂತ್ವನ ಹೇಳಿದರು.
ಮೃತಪಟ್ಟವರ ಕುಟುಂಬಕ್ಕೆ ದೇವರು ದುಃಖ ಬಾರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದರು.
Leave a Comment