ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್ ಮುಂದುವರಿಕೆ: ಜಿಲ್ಲಾಧಿಕಾರಿ ಸೆಲ್ವಮಣಿ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್ ಮುಂದುವರಿಸಲಾಗಿದೆ ಎಂದು ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಮಾಹಿತಿ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆವರೆಗೂ 144 ಸೆಕ್ಷನ್ ಮುಂದು ವರಿಕೆ ಮಾಡಲಾಗುವುದು ಜತೆಗೆ ಶಿವಮೊಗ್ಗದಲ್ಲಿ ಶುಕ್ರವಾರದವರೆಗೂ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದರು.
ಪರಿಸ್ಥಿತಿ ನೋಡಿಕೊಂಡು ಮುಂದೆ ತೀರ್ಮಾನ ಕೈಗೊಳ್ಳುತ್ತೇವೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 6-9 ಗಂಟೆವರೆಗೆ ಅವಕಾಶ ಎಂದು ಆದೇಶ ಹೊರಡಿಸಿರುವುದಾಗಿ ಮಾಹಿತಿಯನ್ನು ನೀಡಿದರು.
Leave a Comment