ಶಿವಮೊಗ್ಗ ವಿವಿಧ ನ್ಯಾಯಾಲಯಗಳಲ್ಲಿನ 27 ಹುದ್ದೆಗಳಿಗೆ ಅರ್ಜಿ ಆಹ್ವಾನ*
ಶಿವಮೊಗ್ಗ, ಫೆಬ್ರವರಿ 28 :
ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ hhttps://districts.ecourts.gov.in/shivamogga/online-recruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಫೆ.25 ರಿಂದ ಮಾರ್ಚ್ 24 ರವರೆಗೆ ಸಲ್ಲಿಸಬಹುದು.
ಕನಿಷ್ಟ 18 ವರ್ಷ ಹಾಗೂ ಸಾಮಾನ್ಯ ವರ್ಗಕ್ಕೆ ಗರಿಷ್ಟ 35, 2ಎ, 2ಬಿ, 3ಎ, 3ಬಿ 38 ವರ್ಷಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ, ಕನ್ನಡ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗ ರೂ.200, ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ರೂ.100 ನ್ನು ನೀಡಲಾದ ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಪಾವತಿಸತಕ್ಕದ್ದು. ಆನ್‍ಲೈನ್ ಮೂಲಕ ಪಾವತಿ ಮಾಡಲು ಇಚ್ಚಿಸದೇ ಇರುವ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಅದರ ಪ್ರಿಂಟ್‍ಔಟ್‍ನ್ನು ಪಡೆದುಕೊಂಡು ಎಸ್‍ಬಿಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.
ಹುದ್ದೆಗಳ ವರ್ಗೀಕರಣ, ವೇತನಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರೆ ಸೂಚನೆಗಳು ಮತ್ತು ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್‍ಗೆ ಭೇಟಿ ನೀಡಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
Leave a Comment