ಎಲ್ಲರೂ ಒಗ್ಗೂಡಿ ಸಾಹಿತ್ಯವನ್ನು, ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕು :ತಾಲ್ಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ
ಸಾಗರ : ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಎಲ್ಲರೂ ಒಗ್ಗೂಡಿ ಸಾಹಿತ್ಯವನ್ನು, ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ ತಿಳಿಸಿದರು.
ಇಲ್ಲಿನ ನೌಕರರ ಭವನದಲ್ಲಿ ಮಂಗಳವಾರ ಸರ್ಕಾರಿ ನೌಕರರ ಸಂಘದಿAದ ಸಾಹಿತ್ಯ ಪರಿಷತ್ ಪದಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಚುನಾವಣೆ ಮುಗಿಯುವ ತನಕ ಗುಂಪುಗಾರಿಕೆ ಇರಲಿ. ಚುನಾವಣೆ ನಂತರ ಎಲ್ಲರೂ ಸೇರಿ ತಾಲ್ಲೂಕಿನಲ್ಲಿ ಕನ್ನಡಮ್ಮನ ಸೇವೆ ಮಾಡುವ ಸಂಕಲ್ಪ ಕೈಗೊಳ್ಳಬೇಕು. ಹಿಂದಿನಿAದಲೂ ಪರಿಷತ್ ಸೇರಿದಂತೆ ಬೇರೆಬೇರೆ ಸಂಘಟನೆಗಳಲ್ಲಿ ನೂತನ ಪದಾಧಿಕಾರಿಗಳು ಆಯ್ಕೆಯಾದಾಗ ಅವರನ್ನು ಅಭಿನಂದಿಸುವ ಕೆಲಸವನ್ನು ಸಂಘ ಮಾಡಿಕೊಂಡು ಬಂದಿದೆ. ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಳ್ಳುವ ಎಲ್ಲ ಸಾಹಿತ್ಯಪರ ಚಟುವಟಿಕೆಗಳಿಗೆ ಸರ್ಕಾರಿ ನೌಕರರ ಸಂಘ ನಿರಂತರ ಸಹಕಾರ ನೀಡುತ್ತದೆ ಎಂದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪರಿಷತ್ ಅಧ್ಯಕ್ಷ ವಿ.ಟಿ.ಸ್ವಾಮಿ, ಸಾಹಿತ್ಯ ಪರಿಷತ್ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕನ್ನಡ ಕಟ್ಟುವ ಕೆಲಸಕ್ಕೆ ಬದ್ದವಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರನ್ನು ಪರಿಷತ್ ಸದಸ್ಯರಾಗಿ ನೊಂದಾಯಿಸಿಕೊಳ್ಳುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಕನ್ನಡ ಭವನ ಕಟ್ಟುವ ಕೆಲಸಕ್ಕೆ ಎಲ್ಲರ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಸಂಘ ಹೆಚ್ಚಿನ ಸಹಕಾರ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಪರಿಷತ್‌ನ ಗೌರವ ಕಾರ್ಯದರ್ಶಿಗಳಾದ ಜಿ.ನಾಗೇಶ್, ನಾರಾಯಣಮೂರ್ತಿ ಕಾನುಗೋಡು, ಕೋಶಾಧ್ಯಕ್ಷ ಲೋಕೇಶಕುಮಾರ್ ಅವರನ್ನು ಅಭಿನಂದಿಸಲಾಯಿತು. ಸಂಘದ ಕಾರ್ಯದರ್ಶಿ ರಾಘವೇಂದ್ರ ಕುಮಾರ್, ಖಜಾಂಚಿ ವಿ.ಚಂದ್ರಶೇಖರ್, ರಾಜ್ಯ ಪರಿಷತ್ ಸದಸ್ಯ ವೈ.ಮೋಹನ್, ಪ್ರಮುಖರಾದ ಡಿ.ಗಣಪತಪ್ಪ, ಲಕ್ಷö್ಮಣ ನಾಯ್ಕ್, ಮಾಲತೇಶ್, ಸೋಮಪ್ಪ, ಎಲ್.ಎಂ.ಹೆಗಡೆ, ರಮೇಶ್ ನಾರಾಯಣ್, ಜಯಶೀಲ, ಜಗನ್ನಾಥ್, ಹನುಮಂತಪ್ಪ, ನಿವೃತ್ತ ನೌಕರರ ಸಂಘದ ಎಸ್.ಬಸವರಾಜ್, ಉಮೇಶ್ ಹಿರೇನೆಲ್ಲೂರು, ಎ.ಸಿದ್ದನಾಯ್ಕ್ ಇನ್ನಿತರರು ಹಾಜರಿದ್ದರು.

Leave a Comment