ಹರಕೆರೆಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ದಿವಸ ಭಕ್ತಾದಿಗಳಿಗೆ ಪ್ರವೇಶ ನಿಷೇಧ
ನಗರದ ಹರಕೆರೆಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ದಿವಸ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.
ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಮತ್ತು ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನ ಆಡಳಿತ ಮಂಡಳಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಭಕ್ತಾದಿಗಳು ಸಹಕಾರ ನೀಡಬೇಕೆಂದು ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ.
Leave a Comment