ಮಹಾನಗರ ಪಾಲಿಕೆ ಸದಸ್ಯರು ದೆಹಲಿ ಪ್ರವಾಸ ಕೈಗೊಂಡಿರುವುದು ಎಷ್ಟು ಸರಿ; ಅಶೋಕ್ ಯಾದವ್ ಪ್ರಶ್ನೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಭರದಿಂದ ಸಾಗಿದ್ದರೂ ಹಲವು ಮೂಲಭೂತ ಸಮಸ್ಯೆಗಳಿದ್ದರು ಸಹ ಮಹಾನಗರ ಪಾಲಿಕೆ ಸದಸ್ಯರು ದೆಹಲಿ ಪ್ರವಾಸ ಕೈಗೊಂಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿಯ ಅಧ್ಯಕ್ಷ ಅಶೋಕ್ ಯಾದವ್ ಪ್ರಶ್ನೆ ಮಾಡಿದ್ದಾರೆ. 
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದಲ್ಲಿ ಹರ್ಷ ಎಂಬ ಯುವಕನ ಹತ್ಯೆ ಕೂಡ ಆಯಿತು. ಶಿವಮೊಗ್ಗ ಅತಿ ಬಿಗಿವಾತಾವರಣದಿಂದ ಕೂಡಿತ್ತು. ಕೊನೆಪಕ್ಷ ಸಂಬಂಧಪಟ್ಟ ವಾರ್ಡ್ ನ ಮೇಯರ್, ಉಪಮೇಯರ್ ಪ್ರವಾಸವನ್ನು ಮೊಟಕುಗೊಳಿಸಿ ಶಿವಮೊಗ್ಗಕ್ಕೆ ವಾಪಾಸ್ ಬರಬಹುದಿತ್ತು. ಆದರೆ, ಅವರು ಪ್ರವಾಸವನ್ನು ಮುಂದುವರೆಸಿದರು. ಅಧ್ಯಯನದ ಹೆಸರಿನಲ್ಲಿ ಪ್ರವಾಸ ಕೈಗೊಂಡಿರುವ ಅವರು ಯಾವ ರೀತಿಯ ಅಧ್ಯಯನ ಮಾಡಿದ್ದಾರೋ ಗೊತ್ತಿಲ್ಲ. ಒಟ್ಟಾರೆ ಜನರ ತೆರಿಗೆ ಹಣ ದುರುಪಯೋಗವಾಗುತ್ತಿದೆ ಎಂದು ಟೀಕಿಸಿದ್ದಾರೆ.
ಸಚಿವ ಈಶ್ವರಪ್ಪ ಅವರು ಈ ಬಗ್ಗೆ ಗಮನ ಹರಿಸಿ ಪ್ರವಾಸಕ್ಕೆ ತೆರಳಿದ ಸದಸ್ಯರು, ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಯಾದವ್ ಮತ್ತು ಎಸ್.ಬಿ. ಅಶೋಕ್ ಕುಮಾರ್ ಆಗ್ರಹಿಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.