*ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಉಸ್ತುವಾರಿ ಸಚಿವರಿಂದ ಸಾಂತ್ವನ*

*ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಚಿವರಿಂದ ಸಾಂತ್ವನ*

*ಹರ್ಷ ಸಂಬಂಧಿಕರ ಆಕ್ರಂದನಕ್ಕೆ ಮಮ್ಮುಲ ಮರುಗಿದ ಸಚಿವ ಡಾ.ನಾರಾಯಣಗೌಡ*

ಶಿವಮೊಗ್ಗ, ಫೆ.21: ನಿನ್ನೆ ರಾತ್ರಿ ಹತ್ಯೆಗೀಡಾದ ಸಿಗೇಹಟ್ಟಿ ಹರ್ಷ ನಿವಾಸಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು‌. ತಂದೆ, ತಾಯಿ, ಸಹೋದರಿಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. 

ಹತ್ಯೆಗೀಡಾದ ಹರ್ಷ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ, ಕುಟುಂಬಸ್ಥರನ್ನು ಕಂಡು ಸಚಿವ ಡಾ‌.ನಾರಾಯಣಗೌಡ ಅವರು ಮಮ್ಮುಲ ಮರುಗಿದರು. ಶೀಘ್ರವೇ ನ್ಯಾಯ ಒದಗಿಸುವ ಭರವಸೆ ನೀಡಿದರು. ಇದೇ ವೇಳೆ  ಸಚಿವ ಡಾ.ನಾರಾಯಣಗೌಡ ಅವರು, ವೈಯಕ್ತಿಕವಾಗಿ ಒಂದು ಲಕ್ಷ ರೂ. ಆರ್ಥಿಕ ನೆರವು ನೀಡಿದರು. 

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದ ತಕ್ಷಣ ಜಿಲ್ಲಾಧಿಕಾರಿ ಡಾ.ಸೆಲ್ವಾಮಣಿ, ಐಜಿ , ಎಸ್‌ಪಿ ಲಕ್ಷ್ಮೀ ಪ್ರಸಾದ್ ಅವರ ಜೊತೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ, ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂದು ರಾತ್ರಿ ಖುದ್ದುಇಲ್ಲೇ ಇದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತೇನೆ. 

*ರಾಜ್ಯದ ಸಾಮರಸ್ಯ ಹಾಳು ಮಾಡುವ ಕಿಡಿಗೇಡಿಗಳ ಹೆಡೆಮುರಿ ಕಟ್ಟುತ್ತೇವೆ: ಸಚಿವ ಡಾ.ನಾರಾಯಣಗೌಡ*

ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನಿಬ್ಬರ ಮೇಲೆ ಅನುಮಾನವಿದ್ದು,ಆ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ತಣದಲ್ಲಿದ್ದು, ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು. 

ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಒಬ್ಬನೇ ಮಗ ಇದ್ದಿದ್ದು, ಅವರ ಕುಟುಂಬದ ನಾವು ಜೊತೆ ಇರ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ
ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ. ರಾಜ್ಯದ ಸಾಮರಸ್ಯ ಹಾಳು ಮಾಡುವ ಕಿಡಿಗೇಡಿಗಳ ಹೆಡೆಮುರಿ ಕಟ್ಟುತ್ತೇವೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.