ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ

ಶಿವಮೊಗ್ಗ: ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಪೊಲಿಯೋ ಲಸಿಕೆಯನ್ನು ಹಾಕಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.
ತುಂಗಾ ನಗರದ ಆಸ್ಪತ್ರೆಯಲ್ಲಿ ಪಲ್ಸ್ ಪೊಲಿಯೋ 2022 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಮಕ್ಕಳಿಗೆ ಲಸಿಕೆ ಹಾಕಿಸುವ ಕಾರ್ಯ ನಡೆಸಲಾಗುತ್ತಿದೆ. ಪೋಷಕರು ಐದು ವರ್ಷದ ಮಕ್ಕಳಿಗೆ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ಪಲ್ಸ್ ಪೊಲಿಯೋ ಕುರಿತು ಅನೇಕ ವರ್ಷಗಳಿಂದ ಜಾಗೃತಿ ಮೂಡಿಸುವಲ್ಲಿ ರೋಟರಿ ಸಂಸ್ಥೆ ಪಾತ್ರವು ಮಹತ್ತರವಾಗಿದೆ. ಪ್ರತಿ ವರ್ಷವು ರೋಟರಿ ಸಂಸ್ಥೆಯ ಎಲ್ಲ ಕ್ಲಬ್‌ಗಳ ಸದಸ್ಯರು ಪಲ್ಸ್ ಪೊಲಿಯೋ ಅಭಿಯಾನ ಯಶಸ್ವಿಗೊಳಿಸುವಲ್ಲಿ ಎಲ್ಲ ರೀತಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಮಕ್ಕಳ ಆರೋಗ್ಯ ಸುರಕ್ಷತೆಗೆ ಸಂಬAಧಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಯಾರೂ ಹೆದರಬೇಕಾದ ಅವಶ್ಯಕತೆ ಇರುವುದಿಲ್ಲ. ಭಾರತದಲ್ಲಿ ಹತ್ತು ವರ್ಷದಿಂದ ಪೊಲಿಯೋ ಇಲ್ಲ. ನೆರೆಹೊರೆ ರಾಷ್ಟçಗಳಲ್ಲಿ ಇನ್ನೂ ಪೊಲಿಯೋ ಇರುವುದರಿಂದ ಪಲ್ಸ್ ಪೊಲಿಯೋ ಕಾರ್ಯಕ್ರಮ ನಿರಂತರವಾಗಿ ಮಾಡಬೇಕಿದೆ. ಯಾವುದೇ ಕಾರಣ ನೀಡದೇ ಎಲ್ಲ ಪಾಲಕರು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಲಸಿಕೆ ಹಾಕಿಸುವುದರಿಂದ ಮಕ್ಕಳ ಆರೋಗ್ಯ ಸದೃಢವಾಗಿರುತ್ತದೆ. ಪಲ್ಸ್ ಪೊಲಿಯೋ ಕಾರ್ಯಕ್ರಮದಿಂದ ಮಕ್ಕಳಿಗೆ ಹಾಕುವ ಎರಡು ಹನಿಯು ಮಕ್ಕಳಿಗೆ ಅತ್ಯಮೂಲ್ಯವಾಗಿರುತ್ತದೆ. ಕಡ್ಡಾಯವಾಗಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೊಲಿಯೋ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಾಳಿ, ಡಾ. ಸಿದ್ಧನಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಡಾ. ಚಂದ್ರಶೇಖರ್, ಪ್ರತಿಮಾ, ಡಾ. ನಾಗರಾಜ ನಾಯ್ಕ್, ಡಾ. ಭೀಮಪ್ಪ, ಸಹಾಯಕ ಗವರ್ನರ್ ಆನಂದಮೂರ್ತಿ, ಜಿ.ವಿಜಯ್‌ಕುಮಾರ್, ಎಲ್ಲ ರೋಟರಿ ಕ್ಲಬ್‌ಗಳ ಅಧ್ಯಕ್ಷರು, ಸದಸ್ಯರು ಮತ್ತು ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.