ಡಿ. ಎಸ್. ದಿನಕರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಚಿತ ಕೋವಿಡ್-19 ಲಸಿಕಾ ಕಾರ್ಯಕ್ರಮ
ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ (NES) ಡಿ. ಎಸ್. ದಿನಕರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಬೊಮ್ಮನಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಎರಡನೇ ಬಾರಿಗೆ ಉಚಿತ ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ಲಸಿಕಾ ಕಾರ್ಯಕ್ರಮದಲ್ಲಿ ಕಾಲೇಜಿನ NSS ಘಟಕದ ಮುಖ್ಯಸ್ಥರಾದ ಶ್ರೀಮತಿ ಶ್ವೇತಾ ಡಿ. ಮತ್ತು ಪದಾಧಿಕಾರಿಗಳಾದ ಸಂಗೀತ ಟಿ. ಎಸ್, ಆದ್ವಿ ಬಿ ವಿ, ಹೇಮಾ, ರಂಜಿತ್ ಕುಮಾರ್, ಅಶ್ವಲ್ ಅರೋಜ, ಉಷಾ, ನಟರಾಜ್ ಮತ್ತು ಎಲ್ಲಾ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಸಹಕರಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಮತ್ತು ಕಾಲೇಜಿನ ಎಲ್ಲಾ ಸಿಬ್ಬಂದಿಗಳಿಗೆ, ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಚಿದಂಬರ ರವರು ಅಭಿನಂದನೆಗಳನ್ನು ತಿಳಿಸಿದರು.
Leave a Comment