ಮಾರ್ಚ್ 5 ರಂದು ಶಿವಮೊಗ್ಗ ಮಹಾನಗರಪಾಲಿಕೆ ಆವರಣದಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ
ಶಿವಮೊಗ್ಗ, ಮಾರ್ಚ್ 03 : ಶಿವಮೊಗ್ಗ ಮಹಾನಗರ ಪಾಲಕೆಯು ದಿ: 05/03/2022 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗ ಮಹಾನಗರಪಾಲಿಕೆ ಆವರಣದಲ್ಲಿ ಸುಶಾಸನ ಭವನ ನಿರ್ಮಾಣ ಹಾಗೂ ಮಹಾತ್ಮಗಾಂಧಿ ನಗರ ವಿಕಾಸ ಯೋಜನಾ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮವನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ|| ನಾರಾಯಣಗೌಡರ ಗೌರವಾನ್ವಿತ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪರವರು ಅಧ್ಯಕ್ಷತೆ ವಹಿಸಿಕೊಂಡು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ (ಭೈರೆತಿ) ಮತ್ತು ವಿಧಾನ ಸಭಾ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವರುಗಳು ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಸಭೆ ಸಚಿವರುಗಳಾದ ಹರತಾಳು ಹಾಲಪ್ಪ, ಎಸ್. ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ ಕೆ.ಬಿ., ವಿಧಾನ ಪರಿಷತ್ ಸದಸ್ಯರುಗಳಾದ ಸಿ.ಎಂ.ಇಬ್ರಾಹಿಂ, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ರುದ್ರೇಗೌಡ ಎಸ್., ಭಾರತಿ ಶೇಟಿ, ಡಿ.ಎಸ್.ಅರುಣ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಕೆ.ಎಸ್., ರಾಮಸಾಕೃಉತ್ನ ಮಟ್ಟ ಅಧಕಾರ ಯುಕ್ತ ಸಮಿತಿ ಅಧ್ಯಕ್ಷ ಆನಂದ ಆ.ಶ್ರೀ., ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಎಸ್.ಅಣ್ಣಪ್ಪ ಸೇರಿದಂತೆ ಪ್ರಾಧಿಕಾರಗಳ ಅಧ್ಯಕ್ಷರು, ನಿಗಮ ಮಂಡಳಿ ಅಧ್ಯಕ್ಷರು, ಮಹಾನಗರ ಪಾಲಿಕೆ ಎಲ್ಲಾ ಸಮಿತಿ ಅಧ್ಯಕ್ಷರು/ಪದಾಧಿಕಾರಿಗಳು/ಸದಸ್ಯರುಗಳು, ಸರ್ಕಾರದ ಕಾರ್ಯದರ್ಶಿಗಳು, ಅಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಡಾ|| ಆರ್. ಸೆಲ್ವಮಣಿ, ಜಿ.ಪಂ. ಸಿಇಓ ಎಂ.ಎಲ್. ವೈಶಾಲಿ, ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಮತ್ತು ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ ಇವರುಗಳು ಉಪಸ್ಥಿತರಿರುವರು.
---------------

Leave a Comment