*ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ ಉದ್ಘಾಟನೆ ಕಾರ್ಯಕ್ರಮ*
ಶಿವಮೊಗ್ಗ ಮಾರ್ಚ್ 11:
ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಮಾ.12 ರಂದು ರಾಜ್ಯಾದ್ಯಂತ ಅನುಷ್ಟಾನಗೊಳಿಸಲಾಗುತ್ತಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಯವರು ರಾಜ್ಯ ಮಟ್ಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಅದರಂತೆ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಳಲೂರು ಹೋಬಳಿ ಹೊಳಲೂರು ಗ್ರಾಮದ
ಶ್ರೀ ಮೈಲಾರೇಶ್ವರ ದತ್ತಾ ಶಿಬಿರ ಆಶ್ರಮದಲ್ಲಿ ಮಾ.12 ರಂದು ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು, ಶಿವಮೊಗ್ಗ ಉಪವಿಭಾಗ ಇವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

Leave a Comment