*ರಾಜ್ಯ ಮಟ್ಟದ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರ*

ಶಿವಮೊಗ್ಗ ಮಾರ್ಚ್ 18:
       ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಜ್ಯ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಬೆಂಗಳೂರು ವಿಭಾಗ ಇವರ ವತಿಯಿಂದ ರಾಜ್ಯ ಮಟ್ಟದ ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರವನ್ನು ಮಾ.21 ರ ಬೆಳಿಗ್ಗೆ 10 ಕ್ಕೆ ನಗರದ ಬಿ.ಹೆಚ್.ರಸ್ತೆಯ ರಾಯಲ್ ಆರ್ಕಿಡ್ ಸೆಂಟ್ರಲ್ ಇಲ್ಲಿ ಏರ್ಪಡಿಸಲಾಗಿದೆ.
      ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಎಂ.ಎಲ್ ಅಧ್ಯಕ್ಷತೆ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಪಿ.ಸಿ.ಎನ್.ಡಿ.ಟಿ ಉಪ ನಿರ್ದೇಶಕ ಡಾ.ವಿವೇಕ್ ದೊರೈ ಪ್ರಾಸ್ತಾವಿಕ ನುಡಿಗಳನ್ನಾಡುವರು.
     ಮುಖ್ಯ ಅತಿಥಿಗಳಾಗಿ ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಬೆಂಗಳೂರು ವಿಭಾಗದ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪನಿರ್ದೇಶಕಿ ಡಾ.ಮಮತ, ಮೆಗ್ಗಾನ್ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.