*ಜಿಲ್ಲಾ ಯುವ ಸಮಾವೇಶ ಕಾರ್ಯಕ್ರಮ* ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ

ಶಿವಮೊಗ್ಗ ಮಾರ್ಚ್ 11:
         ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಸಂಸ್ಕøತಿ ಕಲಾ ತಂಡ ಇವರ ಸಹಯೋಗದಲ್ಲಿ ಮಾ.10 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ‘ಜಿಲ್ಲಾ ಯುವ ಸಮಾವೇಶ ಕಾರ್ಯಕ್ರಮ’ವನ್ನು ಆಯೋಜಿಸಲಾಗಿತ್ತು.
      ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. 
      ಸಮನ್ವಯ ಕಾಶಿಯವರು ಮಾತನಾಡಿ ಯುವ ಜನತೆ ಹೇಗೆ ತಮ್ಮ ಕೌಶಲ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
      ವಿಪತ್ತು ನಿರ್ವಹಣೆ ಮತ್ತು ಮುಂಜಾಗ್ರತಾ ಕ್ರಮಗಳು ಕುರಿತು ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ತಿಳಿಸಿದರು.
     ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕು.ಸಿಂಧು ಮತ್ತು ರಾಷ್ಟ್ರೀಯ ಯುವ ಸಂಸತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕು.ಸುಪ್ರಧ ಅವರನ್ನು ಸನ್ಮಾನಿಸಲಾಯಿತು.
      ನೆಹರು ಯುವಕ ಸಂಘ ಹಾಗೂ ಯುವತಿ ಮಂಡಳಿಯ ಸದಸ್ಯರುಗಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು. 
       ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಎನ್.ಎಸ್.ಎಸ್ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ, ನೆಹರು ಯವ ಕೇಂದ್ರದ ಎಲ್ಲಾ ತಾಲ್ಲೂಕಿನ ಯುವ ಕಾರ್ಯಕರ್ತರು, ವಿದ್ಯಾರ್ಥಿಗಳು, ಯುವಕ ಸಂಘ ಹಾಗೂ ಯುವತಿ ಮಂಡಳಿ ಸದಸ್ಯರುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
(ಫೋಟೊ ಇದೆ)

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.