ಶಿವಮೊಗ್ಗ: ಬಿಎಡ್ ಪದವಿ ವ್ಯಾಸಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸುವಂತೆ ಜಿಲ್ಲಾ NSUI ವತಿಯಿಂದ ಪ್ರತಿಭಟನೆ

  ಶಿವಮೊಗ್ಗ: ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸುವಂತೆ ಹಾಗೂ ಸರ್ಕಾರಿ ವಸತಿ ನಿಲಯಗಳಲ್ಲಿ  ವಾಸ್ತವ್ಯಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಪ್ರತಿಭಟನೆ ನಡೆಸಿದರು.

ಸರ್ಕಾರಿ ಕೋಟಾದಲ್ಲಿ ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಲ್ಕ ವಿನಾಯಿತಿ ನೀಡಿದ್ದು ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಿದ ನಂತರ ರಾಜ್ಯ ಸರ್ಕಾರ ಕಾಲೇಜುಗಳಿಗೆ ಶುಲ್ಕ ಭರಿಸುತ್ತಿದೆ ಆದರೆ ಕಾಲೇಜುಗಳಿಗೆ 3ವರ್ಷ ಗಳಿಂದ ಸಂಪೂರ್ಣ ಶುಲ್ಕ ಸಂದಾಯ ವಾಗಿರುವುದಿಲ್ಲ ಇದರಿಂದ ವಿದ್ಯಾರ್ಥಿಗಳು ಶುಲ್ಕ ಭರಿಸುವಂತೆ ಕಾಲೇಜುಗಳು ಒತ್ತಡ ಹೇರುತ್ತಿದ್ದಾರೆ ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು .

ಆಡಳಿತ ಮಂಡಳಿ ಕೋಟಾ ದಲ್ಲಿ ಶಿಕ್ಷಣ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿಲ್ಲ ಇದರಿಂದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.ಕೂಡಲೇ ಸಮಸ್ಯೆ ಸರಿಪಡಿಸಿ ಸರ್ಕಾರಿ ಹಾಗೂ ಆಡಳಿತ ಮಂಡಳಿ ಕೋಟಾದಡಿ ಶಿಕ್ಷಣ ಪಡೆಯುತ್ತಿರುವ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುವಂತೆ ರಾಜ್ಯ ಸರ್ಕಾರ ಕ್ರಮವಹಿಸಬೇಕು .ಪದವಿ ಶಿಕ್ಷಣ ಹಾಗೂ ಬಿಎಡ್ ವಿದ್ಯಾರ್ಥಿಗಳ ಶೈಕ್ಷಣಿಕ ಅವಧಿಯು ಬೇರೆ ಬೇರೆ ಆಗಿದ್ದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪದವಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಸಮಯ ನೀಡಲಾಗುತ್ತಿರುತ್ತದೆ ಇದರಿಂದ ಬಿ ಎಡ್ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅನೇಕ ಸಮಸ್ಯೆ ಎದುರಾಗುತ್ತಿದೆ ಆದ್ದರಿಂದ ಮುಂದಿನ ವರ್ಷದಿಂದ ಬಿ ಎಡ್ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಪ್ರತ್ಯೇಕ ಸಮಯವಕಾಶ ನೀಡಬೇಕು .

ಸರ್ಕಾರಿ ಕೋಟಾದಡಿ ಹಾಗೂ ಆಡಳಿತ ಮಂಡಳಿ ಕೋಟಾದಲ್ಲಿ   ಬಿಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಅವಕಾಶ ಕಲ್ಪಿಸುತ್ತಿಲ್ಲ ಸರ್ಕಾರಿ ಸ್ಫೋಟದ ರೆಡ್ಡಿ ಬಿ ಎಡ್ ಶಿಕ್ಷಣ ಪಡೆಯುತ್ತಿರುವುದರಿಂದ ವಸತಿ ನಿಲಯ ಅವಕಾಶವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.ಸರ್ಕಾರದ ನಿಯಮಗಳಿಂದ ಬಿಎಡ್ ವ್ಯಾಸಂಗಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಆದ್ದರಿಂದ ಬೇರೆ ಜಿಲ್ಲೆಗಳಿಂದ ಮತ್ತೊಂದು ಜಿಲ್ಲೆಗೆ ಬೀಡ್ ಶಿಕ್ಷಣ ಪಡೆಯುವ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಅವಕಾಶ ಕಲ್ಪಿಸಬೇಕು .ಮೇಲ್ಕಂಡ ಎಲ್ಲ ಬೇಡಿಕೆಗಳನ್ನು ಕೂಡಲೇ ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ರೀತಿಯಲ್ಲೂ ಕ್ರಮಗಳನ್ನು ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಬೃಹತ್ ಮಟ್ಟದಲ್ಲಿ ವಿದ್ಯಾರ್ಥಿಗಳು ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸುತ್ತೇವೆ.
 ಈ ಸಂದರ್ಭದಲ್ಲಿ NSUI ಜಿಲ್ಲಾಧ್ಯಕ್ಷ ವಿಜಯ್ ,ನಗರ ಅಧ್ಯಕ್ಷ ಚರಣ್ ,ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ,ಗಿರೀಶ್ ,ಆಕಾಶ್ ,ಚಂದ್ರೋಜಿ ರಾವ್ ,ಮಂಜು ,ವಿಕಾಸ್ ,ಕಾವ್ಯ, ವಿದ್ಯಾ, ರಂಜಿತಾ ,ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.