ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ: ಸಚಿವ ಕೆ.ಎಸ್.ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾ ಮಾಡಲು ಜೆಡಿಎಸ್ ಆಗ್ರಹ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ನಡೆದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾಮಗಾರಿಗಳಿಗೆ ಸಂಬAಧಿಸಿದAತೆ ಗುತ್ತಿಗೆದಾರರಿಂದ ಶೇ.40 ಕಮಿಷನ್ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ಗುತ್ತಿಗೆದಾರ ಸಂತೋಷ್ ಪಾಟೀಲ್ ಈ ಹಿಂದೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಬಟಾ ಬಯಲು ಮಾಡಿದ್ದರು. ನೆನ್ನೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ ಹಾಗೂ ಈಶ್ವರಪ್ಪನವರನ್ನು ಮೇಲ್ನೋಟಕ್ಕೆ ಆರೋಪಿ ಎಂದು ಮಾಧ್ಯಮಗಳು ತೋರಿಸುತ್ತಿವೆ. ಈ ಆತ್ಮಹತ್ಯೆ ಪ್ರಕರಣವನ್ನು ಈಶ್ವರಪ್ಪನವರು 
ತಿರುಚುವ ಪ್ರಯತ್ನ ಮಾಡುತ್ತಿರುವುದರಿಂದ ಕೂಡಲೇ ಅವರನ್ನು ಸರ್ಕಾರ ಸಚಿವ ಸ್ಥಾನದಿಂದ ವಜಾಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು. ಆತ್ಮಹತ್ಯೆ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಜಿಲ್ಲಾ ಜೆಡಿಎಸ್ ಕಾರ್ಯಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಸಚಿವ ಈಶ್ವರಪ್ಪ ಅವರ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಅವಕಾಶ ನೀಡಲಿಲ್ಲ. ನಂತರ ಮೆರವಣಿಗೆಯೂ ಜಿಲ್ಲಾಧಿಕಾರಿಗಳು ಕಚೇರಿ ತಲುಪಿತು.
ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಕಾಂತರಾಜ್, ರಾಮಕೃಷ್ಣ, ಸುಬ್ಬೇಗೌಡ, ಹೆಚ್.ಪಾಲಾಕ್ಷಿ, ಏಳುಮಲೈಬಾಬು, ನರಸಿಂಹ, ವಾಜಿದ್, ಗೀತಾ ಸತೀಶ್, ಶಾಂತ ಸುರೇಂದ್ರ, ಪ್ರಸನ್ನಕುಮಾರ್, ರೇಖಾ ಚಂದ್ರಶೇಖರ್, ಉಷಾ ನಾಯಕ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
\

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.