ಶಿವಮೊಗ್ಗದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಣೆ


ಶಿವಮೊಗ್ಗ ಏಪ್ರಿಲ್ 14:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 14 ರಂದು ಕುವೆಂಪು ರಂಗ ಮಂದಿರದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.
ಶ್ರೀಮತಿ ಸರಸ್ವತಿ ನಾಗೆಂದ್ರ ಅವರು ವಿಶೇಷ ಉಪನ್ಯಾಸ ನೀಡಿ ಜೈನ ಧರ್ಮದ ಇತಿಹಾಸ, ಮಹಾವೀರರ ಬಾಲ್ಯ, ಜೈನ ಧರ್ಮದ ಪಂಚಶೀಲ ತತ್ವಗಳಾದ ಅಹಿಂಸೆ, ಸತ್ಯ, ಅಸ್ತೇಯ, ಅಪರಿಗ್ರಹ ಹಾಗೂ ಬ್ರಹ್ಮಚರ್ಯ ಜೊತೆಗೆ ಮಹಾವೀರರ ಧರ್ಮ ಬೋಧನೆ, ಅವರ ಜ್ಞಾನೋದಯ ಕುರಿತ ಮಾಹಿತಿಯನ್ನು ತಿಳಿಸಿಕೊಟ್ಟರು. 
ಕಾರ್ಯಕ್ರಮದಲ್ಲಿ ದಿಗಂಬರ ಜೈನ ಸಂಘದ ಅಧ್ಯಕ್ಷರಾದ ಪ್ರಭಾಕರಗೋಗಿ, ಉಪವಿಭಾಗಾಧಿಕಾರಿ ಪ್ರಕಾಶ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪ ನಿರ್ದೇಶಕರಾದ ಉಮೇಶ್ ಹೆಚ್. ಹಾಗೂ ಜೈನ ಧರ್ಮದ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.