ಸರ್ವ ಶ್ರೇಷ್ಠಗ್ರಂಥ ಸಂವಿಧಾನ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ, ಏ.೧೪;
ನಮ್ಮ ಸಂವಿಧಾನ ಪ್ರತಿಯಬ್ಬರಿಗೂ ವಿಶೇಷವಾಗಿ ಕಾಣುತ್ತದೆ. ಎಲ್ಲ ಧರ್ಮಗಳಲ್ಲಿ ಅವರದೇ ಧರ್ಮ ಗ್ರಂಥಗಳಿರುತ್ತವೆ ಆದರೆ ಎಲ್ಲಾ ಭಾರತೀಯರಿಗೂ ಸರ್ವ ಶ್ರೇಷ್ಠಗ್ರಂಥ ಬಾಬಾ ಸಾಹೇಬ ಅಂಬೇಡ್ಕರ್ ಬರೆದಿರುವ ಸಂವಿಧಾನ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವ್ಯಕ್ತಿ ಹುಟ್ಟಿನಿಂದ ಸಾಯುವ ವರೆಗೂ ಸಮಾಜದಲ್ಲಿ ಸಂರಕ್ಣೆಯನ್ನು ಕೊಡಬೇಕು ಎಂಬುದನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ತಿಳಿಸಿದ್ದಾರೆ ಎಂದರು.
ಅಂಬೇಡ್ಕರ್ ನೀಡಿರುವ ಮೂರು ಮಂತ್ರಗಳಾದ ಶಿಕ್ಷಣ ಸಂಘಟನೆ ಮತ್ತು ಹೋರಾಟಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ತೋರಿದ ಆದರ್ಶ ಮಾರ್ಗದಲ್ಲಿ ಎಲ್ಲರು ನಡೆಯಬೇಕು ಎಂದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್ ಮಾತನಾಡಿ ಅಸ್ಪ್ರಶ್ಯತೆ, ಅಸಮಾನತೆ, ಹಿಂಸೆಗಳನ್ನು ಮೆಟ್ಟಿನಿಂತು, ಶೊಷಣೆಗೆ ಒಳಗಾದವರನ್ನು ಮುಖ್ಯ ವಾಹಿನಿಗೆ ತಂದವರು ಅಂಬೇಡ್ಕರ್ ಎಂದು ಹೇಳಿದರು. 
 ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಪಿಯೂಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಶಿವಮೊಗ್ಗ-ಭದ್ರಾವತಿ ನಗರಾಭವೃಧ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನೆ.ಗಿ. ನಾಗರಾಜ್. ಮಹಾನಗರ ಪಾಲಿಕೆಯ ಸದಸ್ಯರರಾದ ಪ್ರಭಾಕರ್, ವಿಶ್ವಾಸ್, ಸತ್ಯ ನಾರಾಯಣ್ , ಜಿಲ್ಲಾಧಿಕಾರಿ ಆರ್ ಸೆಲ್ವಮಣಿ, ಸಿಇಓ ಎಂ ಎಲ್ ವೈಶಾಲಿ, ಮತ್ತಿತರ ಅಧಿಕಾರಿಗಳು ಹಾಜರಿದ್ದರು

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.