ಮೇ 15 ರಂದುವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸನ್ಮಾನ ಹಾಗೂ ಪುನೀತ್ ರಾಜ್ ಕುಮಾರ್ ನುಡಿ ನಮನ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ 60 ನೇ ವರ್ಷದ ಜನ್ಮ ದಿನದ ಸಂಭ್ರಮಾಚರಣೆ ಅಂಗವಾಗಿ ಕಾಂಗ್ರೆಸ್ ಹಿರಿಯ ನಾಯಕರಿಗೆ ಮತ್ತು ಎಲ್ಲಾ ಸಮಾಜದ ಅಧ್ಯಕ್ಷರಿಗೆ, ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸನ್ಮಾನ ಹಾಗೂ ಪುನೀತ್ ರಾಜ್ ಕುಮಾರ್ ನುಡಿ ನಮನವನ್ನು ಮೇ 15 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದಿಂದ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಆರ್. ಮೋಹನ್ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಲರಾಜ್ ಅರಸ್‌ರಸ್ತೆಯಲ್ಲಿರುವ ಭೋವಿ ಸಮುದಾಯ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಹಾರನಹಳ್ಳಿ ಚೌಕಿ ಮಠದ ಶ್ರೀ ನೀಲಕಂಠ ಸ್ವಾಮೀಜಿ ಶಿರಾಳಕೊಪ್ಪ ಶಾಲೋಮನ್ ಚರ್ಚ್ನ ಡಾ. ವಿನೋದ್ ಡಿ.ಚಂದವಾಳ್ ಹಾಗೂ ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಮೌಲಾನಾ ಶಾಉಲ್ ಹಮೀದ್ ಆಶೀರ್ವಚನ ನೀಡಲಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಉದ್ಘಾಟಿಸಲಿದ್ದಾರೆ ಎಂದರು.
ಮಾಜಿ ಸಚಿವೆ ಉಮಾಶ್ರೀ, ಚಲನ ಚಿತ್ರ ನಿರ್ಮಾಪಕ ಉಮಾಪತಿಗೌಡ, ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಕಾಂಗ್ರೆಸ್ ವಕ್ತಾರ ನಿಖಿತ್ ರಾಜ್ ಅವರು ಪುನೀತ್ ರಾಜ್ ಕುಮಾರ್‌ಗೆ ಪುಷ್ಪಾಂಜಲಿ ನುಡಿನಮನ ಸಲ್ಲಿಸಲಿದ್ದಾರೆ. ಶಾಸಕ ಬಿ.ಕೆ. ಸಂಗಮೇಶ್, ಡಿಸಿಸಿ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಸೇರಿದಂತೆ ಪಕ್ಷದ ಎಲ್ಲಾ ಮಾಜಿ ಶಾಸಕರು ಹಾಗೂ ಮುಖಂಡರನ್ನು ಆಹ್ವಾನಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಮಾಪತಿ ಗೌಡ, ರಾಮಚಂದ್ರನಾಯ್ಕ, ಮಹೇಶ್, ಹರ್ಷಿತ್, ಶಿವಣ್ಣ ಇದ್ದರು.
Leave a Comment