ಸ್ಪರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು: ಎಬಿವಿಪಿ ಪ್ರತಿಭಟನೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ

ಶಿವಮೊಗ್ಗ:  ಸ್ಪರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸರಕಾರಿ ಹುದ್ದೆಗೆ ಆಯ್ಕೆಗೊಳ್ಳುವುದು ಪ್ರತಿಯೊಬ್ಬ ವಿದ್ಯಾವಂತ ನಿರುದ್ಯೋಗಿಯ ಕನಸಾಗಿರುತ್ತದೆ. ಆದರೆ ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಆಕ್ರಮಗಳು ನಡೆಯುತ್ತಿರುವುದು ವಿಪರ್ಯಾಸ ಮತ್ತು ಇದನ್ನು ಅಭಾವಿಪ ಆತಿ ಕಟುವಾಗಿ ಖಂಡಿಸುತ್ತದೆ‌ ಎಂದರು. 

ಬಡ ಮತ್ತು ಪ್ರತಿಭಾವವಂತ ವಿದ್ಯಾರ್ಥಿಗಳು ನ್ಯಾಯಯುತವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ತಮ್ಮಕನಸನ್ನು ನನಸಾಗಿಸಲು ಅನೇಕ ಸವಾಲುಗಳನ್ನು ಎದುರಿಸಿ ಹುದ್ದೆಗಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದರೂ ಸಾವಿರರರು - ಲಕ್ಷಾಂತರ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಾರೆ. ಆದರೆ ಎಸುರಿಸುವ ಪರೀಕ್ಷೆಗಳಲ್ಲಿಯೇ ದೊಡ್ಡಮಟ್ಟದಲ್ಲಿ ಅಕ್ರಮ ನಡೆಯುತ್ತವೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ನಿರುದ್ಯೋಗಿಗಳ ಕನಸಿಗೆ ಕಣ್ಣೀರೆರಚಿದಂತೆ ಅಷ್ಟೇ ಅಲ್ಲದೆ ಅನ್ಯಾಯ ಎಸಗಿದಂತೆಯೂ ಆಗುತ್ತದೆ ಎಂದರು.

ಸರಕಾರ ಕೆಇಎ, ಕೆಪಿಎಸ್ಸಿ ಮತ್ತು ಬೇರೆಬೇರೆ ಸಂಸ್ಥೆಗಳಿಂದ ವಿವಿಧ ಸರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಅದರಲ್ಲಿ ತೇರ್ಗಡೆಯಾದವರನ್ನು ಆರ್ಹತೆಯ ಮಾನದಂಡದ ಆಧಾರದಲ್ಲಿ ಹುದ್ದೆಗಳಿಗೆ ನೇಮಿಸಿಕೊಳ್ಳುವ ವಿಧಾನವನ್ನು  ಮೊದಲಿಂದಲೂ ಅನುಸರಿಸುತ್ತ ಬಂದಿದೆ. ಆದರೆ ಇತ್ತೀಚಿನ ಕೆಲ ವರ್ಷಗಳಲ್ಲಿ ಈ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರೀ ಅಕ್ರಮ ಭ್ರಷ್ಟಾಚಾರ ನಡೆಯುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳಲ್ಲಿ ತೀವ್ರ ಹತಾಶರನ್ನಾಗಿಸಿದೆ ಎಂದು ದೂರಿದರು.

ಪರೀಕ್ಷೆಗಳಲ್ಲಿ ಆಶ್ರಮ ನಡೆಯುತ್ತಿರುವ ಬಗ್ಗೆ ಈ ಮೊದಲಿನಿಂದಲೂ ಆರೋಪಗಳು ಕೇಳಿ ಬರುತ್ತಿದ್ದರೂ ಕೂಡ ಇತ್ತೀಚಿನ 3-4 ವರ್ಷಗಳಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ಸರಣಿಯಂತೆ ಬಯಲಾಗತೊಡಗಿದೆ. ಸರಕಾರಿ ಉದ್ಯೋಗ ಗಳಲ್ಲಿ ಅರ್ಹ ಮತ್ತು ಪ್ರತಿಭಾವಂತರಿಗೆ ಅವಕಾಶ ಲಭಿಸುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ಅತ್ಯಂತ ಪಾರದರ್ಶಕರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕೆಂಬ ಉದ್ದೇಶದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತ ಬರಲಾಗಿದೆ. ಆದರೆ ಬಹುತೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ರಾಜಾರೋಷವಾಗಿ ನಡೆಯುತ್ತಿದ್ದು, ಈ ಪರೀಕ್ಷೆಗಳ ನೈಜ ಉದ್ದೇಶವನ್ನೇ ಬುಡಮೇಲು ಮಾಡಿವೆ ಎಂದು ಆರೋಪಿಸಿದರು.

ಆಡಳಿತ ವ್ಯವಸ್ಥೆ, ರಾಜಕೀಯ ನಾಯಕರು, ಉನ್ನತ ಅಧಿಕಾರಿಗಳೂ ಈ ಆಕ್ರಮಗಳಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿರುವುದು ಕೂಡ ಕಾಣಿಬರುತ್ತಿರುವುದು ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಎಸ್, ಪಿಎಸ್ಐ, ಎಸ್ಡಿಎ, ಎಫ್ಡಿಎ, ಸಹಾಯಕ ಪ್ರಾದ್ಯಾಪಕರ ಮತ್ತು ಇನ್ನುಳಿದ ಹುದ್ದೆಗಳ ನೇಮಕಾತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕಾನೂನು ನಿಯಮಾವಳಿಗಳ ಅನುಸಾರ ನ್ಯಾಯಯುತವಾಗಿ ಪಾರದರ್ಶಕವಾಗಿ ನಡೆದಲ್ಲಿ ಮಾತ್ರ ಅದಕ್ಕೊಂದು ಗೌರವ, ಘನತೆ ಇರುತ್ತದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸರಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ತಪ್ಪಿತಸ್ಥರು ಎಷ್ಟೇ ದೊಡ್ಡವಾರಗಿರಲಿ, ಎಷ್ಟೇ ಪ್ರಭಾವಶಾಲಿಯಾಗಿರಲಿ, ಅವರಿಗೆ ಕಠಿನ ಶಿಕ್ಷೆಯಾಗುವಂತೆ ಕಠಿಣ ಕ್ರಮ ವಹಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಸಂಘಟನೆಯ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.