*ಮರು ಪರಿಷ್ಕøತ-ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ*

ಶಿವಮೊಗ್ಗ ಮೇ 21:
     ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಇವರು ಮೇ 22 ಮತ್ತು 23 ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳುವರು.
    ಮೇ 22 ರ ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 9.30 ಗಂಟೆಗೆ ಶಿವಮೊಗ್ಗ ತಲುಪಿ ವಾಸ್ತವ್ಯ ಮಾಡುವರು.
     ಮೇ 23 ರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಹಾಗೂ ಪರಿಶೀಲನೆ ನಡೆಸುವರು. ಮಧ್ಯಾಹ್ನ 2.30 ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಸದರು, ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಮಳೆ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಅಮೃತ ಯೋಜನೆಯ ಗ್ರಾಮ ಪಂಚಾಯ್ತಿಗಳ ಆಯ್ಕೆ ಸಭೆ, ಅಮೃತ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಸಮಗ್ರ ಕೆರೆ ಅಭಿವೃದ್ದಿ ಆಯ್ಕೆ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30 ಗಂಟೆಗೆ ಶಿವಮೊಗ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಸಮಿತಿ ಕಾರ್ಯಾಗಾರ ಉದ್ಘಾಟಿಸುವರು. ಸಂಜೆ 4.30 ಕ್ಕೆ ಶಿವಮೊಗ್ಗದಿಂದ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
====

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.