ಮತ್ತೋಡು ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿತ ಅಪಾರ ಹಾನಿ,: ಪರಿಹಾರಕ್ಕೆ ಆಗ್ರಹ
ಶಿವಮೊಗ್ಗ: ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕೆಂದು ಅಬ್ಬಲಗೆರೆ ಗ್ರಾಮ ಪಂಚಾಯಿತಿ ಸದಸ್ಯ ಹರ್ಷ ಭೋವಿ ಅವರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಸೈಕ್ಲೋನ್ ಪರಿಣಾಮ ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿ ಭಾರೀ ಆಸ್ತಿ- ಪಾಸ್ತಿ ನಷ್ಟಕ್ಕೆ ಕಾರಣವಾಗಿದೆ. ಶಿವಮೊಗ್ಗ ತಾಲೂಕು ಅಬ್ಬಲಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮತ್ತೋಡು ಗ್ರಾಮದಲ್ಲಿ ಮಳೆಯಿಂದ ಮನೆಗಳು ಕುಸಿದು ಬಿದ್ದಿವೆ. ಹಾಗೆಯೇ ಸುಮಾರು ಹತ್ತಿಪ್ಪತ್ತು ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಉಂಟಾಗಿದೆ. ಗ್ರಾಮದಲ್ಲಿನ ವಿದ್ಯುತ್ ಕಂಬ ಕುಸಿದಿದೆ. ಗ್ರಾಮದ ರೈತರು ತಮ್ಮ ಜಮೀನು ಗಳಲ್ಲಿ ಬೆಳೆದ ಬೆಳೆಗಳು ಹಾನಿಯಾಗಿವೆ ಎಂದು ತಿಳಿಸಿದ್ದಾರೆ.
ತಕ್ಷಣವೇ ಕಂದಾಯ ಅಧಿಕರಿಗಳು ಸಮೀಕ್ಷೆ ನಡೆಸಿ, ಮಳೆಹಾನಿ ಸಂತ್ರಸ್ಥರಿಗೆ ಪರಿಹಾರ ನೀಡಬೇಕಿದೆ. ಈ ನಿಟ್ಟಿನಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ತಕ್ಷಣವೇ ಗಮನ ಹರಿಸಿ, ಕಂದಾಯ ಅಧಿಕಾರಿಗಳಿಗೆ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಬೇಕು. ಮಳೆಹಾನಿಸಂತ್ರಸ್ಥರಿಗೆ ಅಗತ್ಯ ಪರಿಹಾರ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.
Leave a Comment