ಪತ್ರಿಕೆ ಹಂಚಿಕೊಂಡು ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನ
ಶಿವಮೊಗ್ಗ : ಪತ್ರಿಕೆ ಹಂಚಿಕೊಂಡು ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ದಿ ಸಂಘ (ರಿ) ಶಿವಮೊಗ್ಗ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸನ್ಮಾನ ಕಾರ್ಯಕ್ರಮದಲ್ಲಿ
ಕಿರಣ್ ಎಂ., ಸತೀಶ್ ಎಸ್., ಲೋಕೇಶ್ ಆರ್.ಪಿ., ನವೀನ್ ಡಿ., ಧನುಷ್ ಎಸ್.ಎಂ. ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಭಾನುವಾರ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷರಾದ ಶಂಕರ ಕುದುರೆಮೋತಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಮಾಡಿದಂತಹ ಸಾಧನೆ ಕುರಿತು ಮಾತನಾಡಿದ ಅವರು, ಸಾಧನೆಗೆ ಯಾವುದೂ ಅಡ್ಡಿಯಾಗಲ್ಲ, ಪತ್ರಿಕೆ ವಿತರಣೆ ಮಾಡಿಕೊಂಡೇ ಉತ್ತಮ ಗಳಿಸಿರುವ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ. ಬಾಲ್ಯದಲ್ಲೇ ಪತ್ರಿಕಾ ವಿತರಣೆ ಜೊತೆಯಲ್ಲಿಯೇ ವಿದ್ಯಾಭ್ಯಾಸವನ್ನು ಮಾಡಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಇವರ ವಿದ್ಯಾಭ್ಯಾಸಕ್ಕೆ ಸರ್ಕಾರವೂ ಪ್ರೋತ್ಸಾಹ ನೀಡಿ ಧನ ಸಹಾಯ ಮಾಡಬೇಕೆಂದು ಆಗ್ರಹಿಸಿದರು. ಮತ್ತು ವಿತರಕರು ಸಂಘಟಿತರಾಗಲು ಕರೆ ನೀಡಿ, ವಿತರಕರ ಕಷ್ಟಗಳ ಬಗ್ಗೆ ಪ್ರಸ್ತಾವಿಕ ನುಡಿಗಳನ್ನಾಡಿದರು.
ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಅಕ್ಷಯಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿತರಕರ ಕಷ್ಟಗಳ ಬಗ್ಗೆ ಮಾತನಾಡಿದ ಅವರು, ಸರ್ಕಾರವು ನಮ್ಮನ್ನು ಕೆಳಮಟ್ಟದಲ್ಲಿಯೇ ನೋಡುತ್ತಿದೆ. ಮೀಸಲಾತಿಯಲ್ಲಿ ಪತ್ರಿಕೆ ವಿತರಣೆ ಮಾಡುತ್ತಿರುವವರಿಗೂ ಸ್ಥಾನವನ್ನು ಕಲ್ಪಿಸಿ, ಅವರ ಉನ್ನತ ಭ್ಯಾಸ ಮತ್ತು ಅಭಿವೃದ್ದಿಗೆ ಸರ್ಕಾರ ಅನುಕೂಲ ಮಾಡಿಕೊಡಬೇಕೆಂದು ವಿನಂತಿಸಿದರು.
ನಂತರ ಮಾತನಾಡಿದ ಜಿಲ್ಲಾಧ್ಯಕ್ಸರಾದ ಸತ್ಯನಾರಾಯಣ್ ರವರು ಮುಂದಿನ ದಿನಗಳಲ್ಲಿ ಪತ್ರಿಕೆ ವಿತರಣೆ ಮಾಡುವ ಹುಡುಗರಿಗೆ ಪ್ರೋತ್ಸಾಹ ಧನ ವಿತರಿಸುವಂತಹ ಕೆಲಸವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ಸಂಘದ ಕಾರ್ಯದರ್ಶಿ ಧನಂಜಯ ಹೆಚ್ ಮಾತನಾಡಿ, ದಿನ ಪತ್ರಿಕೆ ವಿತರಣೆ ಮಾಡಿ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದ್ದು ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಸಾಧನೆ ಮಾಡಲು ದಾರಿಯಾಗಲಿ. ವಿದ್ಯಾರ್ಥಿಗಳು ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದರು.
ಇನ್ನೂ ಮುಂತಾದವರು ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಸಂಘದ ಗೌರವಾಧ್ಯಕ್ಷರಾದ ಗಣೇಶ್ ಭಟ್, ಖಜಾಂಚಿ ಯೋಗಿಶ್ ಪಿ,ಎಸ್. ಗದಗ ಜಿಲ್ಲಾಧ್ಯಕ್ಷರಾದ ಶಂಕರಗುರು ಕಂದಗಲ್, ಮಂಜುನಾಥ್ ಕಬನೂರ್, ವಿನಾಯಕ ಬದಿ, ಕೊಪ್ಪಳದ ನಾಗರಾಜ್ ಕಲಾಲ್, ನರಗುಂದದ ಘಟ್ಟಿ ಸಂಘದ ನಿರ್ದೇಶಕರು, ಸದಸ್ಯರು, ವಿತರಕರು ಸೇರಿದಂತೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Leave a Comment