*ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತಮ ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ*
ಶಿವಮೊಗ್ಗ ಮೇ 21:
2021-22 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಮಾಡುವ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು. ಎಸ್‍ಎಸ್‍ಎಲ್‍ಸಿ ಯಲ್ಲಿ 600 ಕ್ಕೂ ಹೆಚ್ಚು ಅಂಕ ಪಡೆದಿರುವ ನೋಂದಾಯಿತ ಕಾರ್ಮಿಕರ ಮಕ್ಕಳ ಅಂಕಪಟ್ಟಿ ಮತ್ತು ಫಲಾನುಭವಿಯ ನೋಂದಣಿ ಗುರುತಿನ ಚೀಟಿಯನ್ನು ಮೇ 26 ರೊಳಗೆ ಕಾರ್ಮಿಕ ಅಧಿಕಾರಿ/ಕಾರ್ಮಿಕ ನಿರೀಕ್ಷಕ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
Leave a Comment