ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನುಕ್ರಮ ಜರುಗಿಸುವಂತೆ ಒತ್ತಾಯ

ಶಿವಮೊಗ್ಗ: ದಲಿತ ದಂಪತಿಗಳಿಗೆ ಹಲ್ಲೆ ಮಾಡಿ ದಲಿತ ಮಹಿಳೆ ಎಳೆದೊಯ್ದು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು.
ತೀರ್ಥಹಳ್ಳಿ ತಾಲೂಕಿನ ಆರಗ ಅಗ್ರಹಾರದಲ್ಲಿ ಹರಿಜನ ಕಾಲೋನಿಯ ದಲಿತ ದಂಪತಿಗಳನ್ನು ಅಡ್ಡಗಟ್ಟಿ ದೇವರಗುಡಿ ನಿವಾಸಿಗಳಾದ ಸಂಪತ್, ಆದರ್ಶ ಮುಂತಾದವರು ಸೇರಿ ಹಲ್ಲೆ ನಡೆಸಿ ಮಹಿಳೆಯನ್ನು ರಬ್ಬರ್ ಪ್ಲಾಂಟೇಷನ್ ಗೆ ಎಳೆದುಕೊಂಡು ಹೋಗಿದ್ದಲ್ಲದೇ, ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಹಿಳೆ ಜೋರಾಗಿ ಕೂಗಿಕೊಂಡಿದ್ದರಿಂದ ಅವರ ಪತಿಗೂ ಎಚ್ಚರವಾಗಿ ಸಹಾಯಕ್ಕೆ ಕರೆದಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಓಡಿ ಹೋಗಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ದಂಪತಿಗಳು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರಿಗೆ ದೂರು ನೀಡಿದರೂ ಕೂಡ ಪೊಲೀಸರು ಯಾವದೇ ಕ್ರಮ ತೆಗೆದುಕೊಂಡಿಲ್ಲ. ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. ಆದ್ದರಿಂದ ನೊಂದ ದಲಿತ ದಂಪತಿಗಳಿಗೆ ನ್ಯಾಯ ಸಿಗಬೇಕು. ಸಂತ್ರಸ್ತರಿಗೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಮುಖರಾದ ಹಾಲೇಶಪ್ಪ ಟಿ.ಹೆಚ್., ಶಿವಕುಮಾರ್ ಅಸ್ತಿ, ಮಂಜುನಾಥ್, ಶೇಷಪ್ಪ. ಪರಮೇಶ್ ಸೂಗೂರು, ಜಗ್ಗು, ರುದ್ರಮ್ಮ ರಂಗಸ್ವಾಮಿ, ಕಿಟ್ಟಿ ಇದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.