*ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ*

ಶಿವಮೊಗ್ಗ : ಜೂನ್ 14 : 2022-23ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು,  ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.  ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ 080-23561628/23566082/23568223 ಗಳನ್ನು ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ  ಸಂಸ್ಥೆ, ನರಸಾಪುರ, ಗದಗ್ (08372-297221) ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ (08182-223405) ಸಂಪರ್ಕಿಸುವುದು. ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ: 20/06/2022 ರೊಳಗಾಗಿ ಪ್ರಾಂಶುಪಾಲರು, ಕ.ಕೈ.ತಂ.ಸಂ. ನರಸಾಪುರ, ಗದಗ-582102 ಇವರಿಗೆ ಸಲ್ಲಿಸುವಂತೆ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
----------------
*

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.