ಹವಾಮಾನಾಧಾರಿತ ಬೆಳೆವಿಮೆಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ ಜೂನ್ 06: ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ (ಖWಃಅIS) ಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದ್ದು, ರೈತರು ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಬ್ಯಾಂಕ್‍ಗಳನ್ನು ಸಂಪರ್ಕಿಸಿ ಅಡಿಕೆ, ಕಾಳುಮೆಣಸು ಮತ್ತು ಶುಂಠಿ ಬೆಳೆಗಳಿಗೆ ದಿ: 30/06/2022 ಹಾಗೂ ಮಾವು ಬೆಳೆಗೆ ದಿ: 31/07/2022 ರೊಳಗೆ ಬೆಳೆ ವಿಮೆಗಾಗಿ ನೊಂದಾಯಿಸಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ತೋಟಗಾರಿಕೆ ಇಲಾಖೆ ಅಥವಾ ರೈತ ಸಂಪರ್ಕ ಅಧಿಕಾರಿಗಳನ್ನು ಸಂಪರ್ಕಿಸುವುದು.  ಶಿವಮೊಗ್ಗ 08182-270415/9448036611, ಭದ್ರಾವತಿ 08282-268239/9900046087, ಶಿಕಾರಿಪುರ 08187-223544/9663634388, ಸೊರಬ 08184-272112/9108280642, ಸಾಗರ 08183-226193/7892782514, ತೀರ್ಥಹಳ್ಳಿ 08181-228151/9900046081 ಹಾಗೂ ಹೊಸನಗರ 08185-221364/9591695327 ಗಳನ್ನು ಸಂಪರ್ಕಿಸುವುದು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.